ನವದೆಹಲಿ: ಜನರಿಕ್ ಔಷಧಿಗಳನ್ನು ಕೈಗೆಟಕುವ ದರದಲ್ಲಿ ಒದಗಿಸಲು ಸ್ಥಾಪಿಸಿರುವ ಜನೌಷಧಿ ಕೇಂದ್ರಗಳಿಂದ ಬಡವರು ಮತ್ತು ಮಧ್ಯಮ ವರ್ಗದವರು ಲಾಭ ಪಡೆದುಕೊಳ್ಳುವುದರ ಮೂಲಕ ಸುಮಾರು 13,000ಕೋಟಿ ರೂ. ಉಳಿತಾಯ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಜನೌಷಧಿ ದಿವಸ್‍ದ ಅಂಗವಾಗಿ ಜನ ಔಷಧಿ ಪರಿಯೋಜನಾ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅವರು, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (ಪಿಎಂಬಿಜೆಪಿ) ಜನಸಾಮಾನ್ಯರಿಗೆ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಒದಗಿಸಲು ಫಾರ್ಮಾಸ್ಯುಟಿಕಲ್ಸ್ ಇಲಾಖೆಯು ಪ್ರಾರಂಭಿಸಿದ ಅಭಿಯಾನವಾಗಿದೆ ಎಂದು ತಿಳಿಸಿದರು.
Advertisement
Advertisement
ಜನೆರಿಕ್ ಔಷಧಗಳನ್ನು ಒದಗಿಸಲು ಪಿಎಂಬಿಜೆಪಿ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅವುಗಳು ಅಗ್ಗದ ಬೆಲೆಯಲ್ಲಿ ಲಭ್ಯವಿದ್ದು, ಗುಣಮಟ್ಟ ಮತ್ತು ಪರಿಣಾಮಕಾರಿತ್ವದಲ್ಲಿ ದುಬಾರಿ ಬ್ರಾಂಡ್ ಔಷಧಿಗಳಂತೆಯೇ ಇರುತ್ತವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ, 25 ಬಿಜೆಪಿ ಸಂಸದರಿದ್ರೂ ಹಣ ಕೇಳಲ್ಲ: ಸಿದ್ದರಾಮಯ್ಯ ವಾಗ್ದಾಳಿ
Advertisement
ಇಂದು, ದೇಶದಲ್ಲಿ 8,500ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳು ಕೇವಲ ಸರ್ಕಾರಿ ಮಳಿಗೆಗಳಲ್ಲ ಆದರೆ ಸಾಮಾನ್ಯ ಜನರಿಗೆ ಪರಿಹಾರ ಕೇಂದ್ರಗಳಾಗಿವೆ ಎಂದು ಹೇಳಿದರು.
Advertisement
ಕ್ಯಾನ್ಸರ್, ಕ್ಷಯ, ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ಅಗತ್ಯವಿರುವ 800ಕ್ಕೂ ಹೆಚ್ಚು ಔಷಧಿಗಳ ಬೆಲೆಯನ್ನು ತಮ್ಮ ಸರ್ಕಾರ ನಿಯಂತ್ರಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶ ದ್ರೋಹಿಗಳಂದ್ರೆ ಕಾಂಗ್ರೆಸ್ಸಿಗರು, ಕಾಂಗ್ರೆಸ್ ಅಂದ್ರೆನೆ ದೇಶ ದ್ರೋಹ: ಚೈತ್ರಾ ಕುಂದಾಪುರ
ಜನರಿಕ್ ಔಷಧಿಗಳ ಬಳಕೆ ಮತ್ತು ಜನೌಷಧಿ ಪರಿಯೋಜನಾ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ 1 ರಿಂದ ದೇಶಾದ್ಯಂತ ಜನೌಷಧಿ ವಾರ ಆಚರಿಸಲಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.