ಲಕ್ನೋ: ಪ್ರಧಾನಿ ಮೋದಿ ಅವರು ಎಲ್ಲಾ ತನಿಖಾ ಸಂಸ್ಥೆಗಳನ್ನು ತೆಗೆದು ಹಾಕಿ ಕುಮಾರ್ ವಿಶ್ವಾಸ್ ಅವರನ್ನು ಮಾತ್ರ ನೇಮಿಸಿಕೊಳ್ಳಿ. ಅವರೇ ಉಗ್ರರನ್ನು ಹುಡುಕಿಕೊಡುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವ್ಯಂಗ್ಯವಾಡಿದರು.
ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿಯು ತನ್ನ ಎಲ್ಲಾ ತನಿಖಾ ಸಂಸ್ಥೆಯಿಂದ ದಾಳಿ ನಡೆಸಿತ್ತು. ಆದರೆ ಅವರಿಗೆ ಏನೂ ಸಿಗಲಿಲ್ಲ. ಆದರೆ ಗಾಜಿಯಾಬಾದ್‍ನ ಕವಿ ಕೇಜ್ರಿವಾಲ್ ಉಗ್ರ ಎಂಬ ಕನಸನ್ನು ಕಾಣುತ್ತಿದ್ದಾರೆ. ನಾನು ಮೋದಿ ಅವರಲ್ಲಿ ಕೇಳಿಕೊಳ್ಳುತ್ತೇನೆ. ಎಲ್ಲಾ ತನಿಖಾ ಸಂಸ್ಥೆಗಳನ್ನು ತೆಗೆದು ಹಾಕಿ ಗಾಜಿಯಾಬಾದ್‍ನ ಕವಿಯನ್ನು ಮಾತ್ರ ನೇಮಿಸಿ. ಅವರು ಯಾರು ಉಗ್ರರು ಎಂದು ಹೇಳುತ್ತಾರೆ ಎಂದು ಟೀಕಿಸಿದರು.
Advertisement
Advertisement
ಇತ್ತೀಚೆಗೆ ಪ್ರಧಾನಿ ಮೋದಿ ಅವರು ಮಾತನಾಡಿ, ಈ ರೀತಿ ದೇಶದ್ರೋಹದಲ್ಲಿ ತೊಡಗಿರುವವರ ವಿರುದ್ಧ ಗಂಭೀರ ಪ್ರಕರಣ ದಾಖಲಿಸಬೇಕು. ಈ ಬಗ್ಗೆ ಸರಿಯಾಗಿ ತನಿಖೆ ನಡೆಸುತ್ತೇವೆ ಎಂದಿದ್ದರು. ಅಷ್ಟೇ ಅಲ್ಲದೇ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಗಂಭೀರವಾಗಿ ತನಿಖೆ ನಡೆಸಲು ಒತ್ತಾಯಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಈ ಪ್ರಕರಣದ ಕುರಿತು ತಾವೇ ಖುದ್ದಾಗಿ ತನಿಖೆ ನಡೆಸುತ್ತೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಐದು ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ: ಪೃಥ್ವಿರಾಜ್ ಚವಾಣ್
Advertisement
Advertisement
ಈ ಹಿಂದೆ ಅರವಿಂದ್ ಕೇಜ್ರಿವಾಲ್ ಪಂಜಾಬ್‍ನ್ನು ಬೇರೆ ರಾಷ್ಟ್ರವಾಗಿ ಅಲ್ಲಿಯ ಪ್ರಧಾನಿ ಆಗಲು ಬಯಸುತ್ತಿದ್ದಾರೆ. ಅವರಿಗೆ ಖಾಲಿಸ್ತಾನಿದ ಉಗ್ರರ ನಂಟಿದೆ ಎಂದು ಎಂದು ಆಪ್‍ನ ಮಾಜಿ ನಾಯಕ ಕುಮಾರ್ ವಿಶ್ವಾಸ್ ಆರೋಪಿಸಿದ್ದರು. ಅಲ್ಲದೇ ಆಪ್‍ಗೆ ಸಿಖ್ ಫಾರ್ ಜಸ್ಟಿಸ್ ಎಂಬ ಖಾಲಿಸ್ತಾನ ಸಂಘಟನೆ ಬೆಂಬಲ ವ್ಯಕ್ತಪಡಿಸಿ ಬರೆದಿರುವ ಪತ್ರವನ್ನು ಗಮನ ಸೆಳೆದಿದ್ದರು. ಇದನ್ನೂ ಓದಿ: ಹಿಜಬ್ ವಿವಾದ – ಶೀರೂರು ಮಠ, ಶಬರಿ ಮಲೆ, ತ್ರಿವಳಿ ತಲಾಖ್ ಪ್ರಕರಣ ಪ್ರಸ್ತಾಪಿಸಿ ಎಜಿ ವಾದ