ನವದೆಹಲಿ: ರೈತರಿಗೆ (Farmers) ಗುಡ್ ನ್ಯೂಸ್. ಅ.17 ಸೋಮವಾರ ಕಿಸಾನ್ ಸಮ್ಮಾನ್ ಯೋಜನೆಯಡಿ (PM Kisan Samman) 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಾಗುತ್ತಿದೆ.
16 ಸಾವಿರ ಕೋಟಿ ಹಣ 8 ಲಕ್ಷ ರೈತರ ಖಾತೆಗಳನ್ನು ಸೇರಲಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi), ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೇ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಮೋದಿ ಆರಂಭಿಸಲಿದ್ದಾರೆ. ದೇಶದಲ್ಲಿರುವ 2.7 ಲಕ್ಷ ಗೊಬ್ಬರದ ಅಂಗಡಿಗಳನ್ನು ಹಂತ ಹಂತವಾಗಿ ವನ್ ಸ್ಟಾಪ್ ಸೆಂಟರ್‌ಗಳಾಗಿ ಬದಲಿಸಿ ಪಿಎಂ ಸಮೃದ್ಧಿ ಕೇಂದ್ರಗಳೆಂದು ಮರುನಾಮಕರಣ ಮಾಡಲಾಗುತ್ತದೆ. ಇದನ್ನೂ ಓದಿ: 22 ವರ್ಷಗಳ ಬಳಿಕ ನಡೆಯುತ್ತಿರುವ ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಕೌಂಟ್‍ಡೌನ್
ವಿವಿಧ ಸಂಘ-ಸಂಸ್ಥೆಗಳಿಂದ ಒಂದು ಕೋಟಿಗೂ ಹೆಚ್ಚು ರೈತರು ಈ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದೀಗ ದೇಶದಲ್ಲಿರುವ ರಸಗೊಬ್ಬರ ಚಿಲ್ಲರೆ ಅಂಗಡಿಗಳನ್ನು ಹಂತ ಹಂತವಾಗಿ ಪ್ರದಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳಾಗಿ ಪರಿವರ್ತಿಸುವ ಕಾರ್ಯ ಮುಂದಿನ ದಿನಗಳಲ್ಲಿ ನಡೆಯಲಿದೆ. ಇದನ್ನೂ ಓದಿ: ಹಾಂಕಾಂಗ್ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ – ಮುಂದಿನ ಗುರಿ ತೈವಾನ್ ಎಂದ ಕ್ಸಿ ಜಿನ್‌ಪಿಂಗ್
ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ:
ಪಿಎಂ ಕಿಸಾನ್ ಸಮ್ಮಾನ್ ನಿಧಿಯನ್ನು 2019ರ ಫೆಬ್ರವರಿ 24 ರಂದು ಜಾರಿಗೊಳಿಸಲಾಯಿತು. ಈ ಯೋಜನೆ ಮೂಲಕ ರೈತರಿಗೆ ವರ್ಷಕ್ಕೆ 6,000 ರೂ. ಪ್ರೋತ್ಸಾಹ ಧನ ನೀಡಿ ಕೃಷಿ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ನಂತೆ ವರ್ಷಕ್ಕೆ ಮೂರು ಕಂತಿನಲ್ಲಿ 6 ಸಾವಿರ ರೂ. ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಈಗಾಗಲೇ 11 ಕಂತುಗಳಲ್ಲಿ ರೈತರ ಖಾತೆಗೆ ಹಣ ಬಿಡುಗಡೆಗೊಳಿಸಲಾಗಿದೆ. ಕಳೆದ ಮೇ ತಿಂಗಳಿನಲ್ಲಿ ಕೊನೆಯ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿತ್ತು.