ಹಾಸನ: ವಿಶ್ವ ಯೋಗ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಸಮಸ್ತ ಕನ್ನಡಿಗರ ಪರವಾಗಿ ಅವರಿಗೆ ಸ್ವಾಗತ ಕೋರುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.
Advertisement
ಹಾಸನದಲ್ಲಿ ಮಾತನಾಡಿದ ಅವರು, ಸಮಸ್ತ ಕನ್ನಡಿಗರು, ಮೈಸೂರಿಗರ ಪರವಾಗಿ ಮೋದಿ ಅವರಿಗೆ ಸ್ವಾಗತ ಕೋರುತ್ತೇನೆ. ಕಳೆದ ಏಪ್ರಿಲ್ 5 ರಂದು ನಾನು ನನ್ನ ಕುಟುಂಬ, ನಮ್ಮ ಪಾರ್ಲಿಮೆಂಟರಿ ಅಫೇರ್ಸ್ ಮಿನಿಸ್ಟರ್ ಆದಂತಹ ಪ್ರಹ್ಲಾದ್ ಜೋಶಿ ಅವರೊಂದಿಗೆ ಹೋಗಿ, ಮೋದಿ ಅವರನ್ನು ಖುದ್ದಾಗಿ ಮೈಸೂರಿಗೆ ಆಗಮಿಸಲು ಮನವಿ ಮಾಡಿದ್ದೆವು. ಇದನ್ನೂ ಓದಿ: ಕಾರವಾರದಲ್ಲಿ ಉದ್ದ ಕಣ್ಣಿನ ಅಪರೂಪದ ಏಡಿ ಪತ್ತೆ
Advertisement
Advertisement
ಮೈಸೂರು ಸಿಟಿ ಆಫ್ ಯೋಗ ಎಂದು ಪ್ರಸಿದ್ಧ ಪಡೆದಿದೆ. ಮಹಾರಾಜರು, ಅಯ್ಯಂಗಾರರು, ಕೃಷ್ಣಮಾಚಾರಿ, ಪಟ್ಟಾಭಿಯವರೆಲ್ಲರು ಯೋಗ ಪೋಷಕರಾಗಿದ್ದಾರೆ. ಅವರೆಲ್ಲರ ಪ್ರೋತ್ಸಾಹದಿಂದ ಮೈಸೂರು ಸಿಟಿ ಆಫ್ ಯೋಗ ಎನಿಸಿಕೊಂಡಿದೆ. ಇದೀಗ ನಮ್ಮ ಮನವಿಗೆ ಸ್ಪಂದಿಸಿ ಮೋದಿಯವರು ಬರುತ್ತಿರುವುದು ಅತೀವ ಸಂತಸ ತಂದಿದೆ. ಈ ಒಂದು ಕಾರ್ಯಕ್ರಮವನ್ನು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಯೋಗಪಟುಗಳನ್ನು ಒಂದೇ ಕಡೆ ಕಲೆ ಹಾಕಿ ಅದ್ಭುತವಾಗಿ ನಡೆಸಿಕೊಡುತ್ತೇವೆ. ಇದನ್ನೂ ಓದಿ: ಅಕ್ರಮ ಗಣಿ ಮಾಫಿಯಾಗೆ ಮಂಡ್ಯ ವ್ಯಕ್ತಿ ಬಲಿ – ಹೊಳೆನರಸೀಪುರ ಅರಣ್ಯದಲ್ಲಿ ಹೂತು ಹಾಕಿದ್ರಾ ಶವ?
Advertisement
ಮೋದಿ ಅವರ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಮಂತ್ರಿಗಳು ಸೇರಿದಂತೆ ಹಲವರು ಪಾಲ್ಗೊಳ್ಳುತ್ತಾರೆ. ಭದ್ರತೆ ಸಂಬಂಧ ಏನೇ ವಿಷಯ ಇದ್ದರೂ ಜಿಲ್ಲಾಡಳಿತ, ರಾಜ್ಯ ಸರ್ಕಾರ ಎಸ್‍ಬಿಜಿ ಜೊತೆ ಕೋರ್ಡಿನೇಷನ್ ನಡೆಸಲಿದೆ ಎಂದು ತಿಳಿಸಿದ್ದಾರೆ.