ನವದೆಹಲಿ: ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ 125ನೇ ಜನ್ಮದಿನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಬೋಸ್‌ಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಇಂಡಿಯಾ ಗೇಟ್ ಬಳಿ ಸ್ಥಾಪನೆಗೊಂಡ ಅತಿ ದೊಡ್ಡ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ, ಈ ಬಗ್ಗೆ ಟ್ವಿಟ್ಟರ್‌ಲ್ಲಿ ಹಂಚಿಕೊಂಡಿದ್ದಾರೆ.
ನೇತಾಜಿ ಸುಭಾಷ್ ಚಂದ್ರಬೋಸ್ ಅವರು ನಮ್ಮ ದೇಶಕ್ಕೆ ನೀಡಿದ ಕೊಡುಗೆ ಅಪಾರ. ಅವರ ತ್ಯಾಗಕ್ಕೆ ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡುತ್ತಾರೆ. ಇಂಡಿಯಾ ಗೇಟ್‌ನಲ್ಲಿ ಈ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರನ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ಮೂಲಕ ಅವರಿಗೆ ಭಾರತ ಋಣಿಯಾಗಿದೆ ಎಂದು ಟ್ವೀಟ್ ಮಾಡಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪ ಸಮರ್ಪಣೆ ಮಾಡುತ್ತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Advertisement
सभी देशवासियों को पराक्रम दिवस की ढेरों शुभकामनाएं।
नेताजी सुभाष चंद्र बोस की 125वीं जयंती पर उन्हें मेरी आदरपूर्ण श्रद्धांजलि।
I bow to Netaji Subhas Chandra Bose on his Jayanti. Every Indian is proud of his monumental contribution to our nation. pic.twitter.com/Ska0u301Nv
— Narendra Modi (@narendramodi) January 23, 2022
Advertisement
ಇಡೀ ರಾಷ್ಟ್ರವು ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಮಯದಲ್ಲಿ ಗ್ರಾನೈಟ್‌ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂಬ ಮಾಹಿತಿ ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಇದು ಅವರಿಗೆ ಭಾರತದ ಋಣದ ಸಂಕೇತವಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.
Advertisement
Advertisement
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೂ, ಅವರ ಹೊಲೊಗ್ರಾಮ್ ಪ್ರತಿಮೆ ಅದೇ ಸ್ಥಳದಲ್ಲಿ ಇರುತ್ತದೆ. ಜನವರಿ 23ರಂದು ನೇತಾಜಿ ಅವರ ಹುಟ್ಟುಹಬ್ಬದ ದಿನ ಹೊಲೊಗ್ರಾಮ್ ಪ್ರತಿಮೆಯನ್ನು ನಾನು ಅನಾವರಣಗೊಳಿಸುತ್ತೇನೆ. ಈ ಮುನ್ನ ಕಿಂಗ್ ಜಾರ್ಜ್ ವಿ ಅವರ ಪ್ರತಿಮೆ ಈ ಸ್ಥಳದಲ್ಲಿತ್ತು. ಆದರೆ ಅದನ್ನು 1968ರಲ್ಲಿ ತೆಗೆದುಹಾಕಲಾಗಿತ್ತು. ಇದೀಗ ನೇತಾಜಿ ಅವರ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ ಎಂದು ಇತ್ತೀಚೆಗೆ ಮೋದಿ ತಿಳಿಸಿದ್ದರು. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ
ನೇತಾಜಿ ಅವರ ಜನ್ಮದಿನವನ್ನು ದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸಲಾಗುವುದು ಎಂದು ಸರ್ಕಾರ ಘೋಷಿಸಿತು. ಅಷ್ಟೇ ಅಲ್ಲ, ಈ ವರ್ಷ, ಗಣರಾಜ್ಯೋತ್ಸವ ಆಚರಣೆಗಳು ಸಾಮಾನ್ಯವಾಗಿ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಪ್ರಾರಂಭವಾಗುತ್ತಿದೆ. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ