ನವದೆಹಲಿ: ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ ಹಾಗೂ ಹುತಾತ್ಮರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ನಮನ ಸಲ್ಲಿಸಿದ್ದಾರೆ.
ಬಾಪು ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರ ಉದಾತ್ತ ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು ನಮ್ಮೆಲ್ಲರ ಪ್ರಯತ್ನವಾಗಿದೆ ಎಂದ ಅವರು, ಇಂದು, ಹುತಾತ್ಮರ ದಿನದಂದು, ನಮ್ಮ ದೇಶವನ್ನು ಧೈರ್ಯದಿಂದ ರಕ್ಷಿಸಿದ ಎಲ್ಲಾ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುತ್ತೇನೆ. ಅವರ ಸೇವೆ ಮತ್ತು ಧೈರ್ಯ ಸದಾ ಸ್ಮರಣೀಯ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
Remembering Bapu on his Punya Tithi. It is our collective endeavour to further popularise his noble ideals.
Today, on Martyrs’ Day, paying homage to all the greats who courageously safeguarded our nation. Their service and bravery will always be remembered.
— Narendra Modi (@narendramodi) January 30, 2022
ಇಂದು ಪ್ರಸಾರವಾಗುವ 85 ನೇ ಸಂಚಿಕೆಯ ಮನ್ ಕಿ ಬಾತ್‍ನಲ್ಲಿ ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ವರ್ಷದ ಮೊದಲ ಆವೃತ್ತಿಯಾಗಲಿದೆ. ಇಂದು ಗಾಂಧೀಜಿ ಅವರ ಪುಣ್ಯ ತಿಥಿಯಾದ್ದರಿಂದ ಅವರ ಸ್ಮರಣೆಯನ್ನು ಮಾಡಿದ ನಂತರ ಪ್ರಾರಂಭವಾಗುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಮತಾಂತರ ತಡೆಗೆ ಕಾನೂನು ಅಗತ್ಯ, ಅದು ದುರುಪಯೋಗವಾಗ್ಬಾರ್ದು: ಕೇಜ್ರಿವಾಲ್
ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಹೋರಾಡಿ ಕೊಡುಗೆಯನ್ನು ನೀಡಿದ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ಸಲ್ಲಿಸಲಾಗುವುದು. ಇವರ ಪುಣ್ಯತಿಥಿಯಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಈ ಕುರಿತು ಪ್ರಧಾನಿ ಅವರು ಭಾಷಣದಲ್ಲಿ ಪ್ರಸ್ತಾಪಿಸಲಿದ್ದಾರೆ. ಇದನ್ನೂ ಓದಿ: ಗಾಡಿ ಟೋಯಿಂಗ್ ಮಾಡ್ತಿದ್ದ ASIಗೆ ಕಲ್ಲೇಟು- ವಿಕಲಚೇತನ ಮಹಿಳೆಗೆ ಬೂಟಿನಿಂದ ಒದ್ದ ನಾರಾಯಣ್