ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಶಂಕರಾಚಾರ್ಯ ಪ್ರತಿಮೆಯನ್ನು ಅನಾವರಣಗೊಳಿಸಿದರು.
Advertisement
ಮೊದಲಿಗೆ ಶಿವನಿಗೆ ಪ್ರಾರ್ಥನೆ ಸಲ್ಲಿಸಿದ ಮೋದಿ ಬಳಿಕ, ದೇಗುಲದ ಹಿಂದೆ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ಪ್ರತಿಷ್ಠಾಪಿಸಿರುವ ಆದಿಗುರು ಶಂಕರಾಚಾರ್ಯ ಅವರ ಪುತ್ಥಳಿ ಅನಾವರಣಗೊಳಿಸಿದರು. ಇದನ್ನೂ ಓದಿ: ಅಭಿವೃದ್ಧಿಯಾಯ್ತು ಕೋವಿಡ್-19 ಮಾತ್ರೆ; ಮೊದಲ ರಾಷ್ಟ್ರವಾಗಿ ಯುಕೆ ಅನುಮೋದನೆ
Advertisement
Advertisement
2013ರ ಜಲಪ್ರಳಯದಲ್ಲಿ ಹಾನಿಗೀಡಾದ ಶಂಕರಾಚಾರ್ಯ ಸಮಾಧಿಯನ್ನು ಇದೀಗ ಪುನರ್ ನಿರ್ಮಾಣ ಮಾಡಲಾಗಿದೆ. ಪ್ರಧಾನಿ ಕಾರ್ಯಾಲಯದ ಸೂಚನೆಯ ಮೇರೆಗೆ ಮೈಸೂರಿನ ಖ್ಯಾತ ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಈ ಪ್ರತಿಮೆಯನ್ನು ನಿರ್ಮಿಸಿದ್ದು, ಶಂಕರಾಚಾರ್ಯರ ಪುತ್ಥಳಿ 12 ಅಡಿ ಎತ್ತರವಿದ್ದು, ಕುಳಿತ ಭಂಗಿಯಲ್ಲಿದೆ. 35 ಟನ್ ತೂಕದ ಪುತ್ಥಳಿ ಕೆತ್ತಲು ಹೆಗ್ಗಡದೇವನಕೋಟೆಯಿಂದ ತರಲಾದ 120 ಟನ್‍ನ ಕೃಷ್ಣಶಿಲೆ ಬಳಸಲಾಗಿದೆ. ಇದನ್ನೂ ಓದಿ: ಬಿಹಾರ್: ನಕಲಿ ಮದ್ಯ ಸೇವಿಸಿ 24 ಮಂದಿ ಸಾವು!
Advertisement
Prime Minister Narendra Modi unveils the statue of Shri Adi Shankaracharya at Kedarnath in Uttarakhand pic.twitter.com/7yX0Ft7fOO
— ANI (@ANI) November 5, 2021
ಜೊತೆಗೆ ರೂ.400 ಕೋಟಿ ಮೌಲ್ಯದ ಕೇದಾರಪುರಿ ಮರು ನಿರ್ಮಾಣ ಯೋಜನಗಳು ಸೇರಿ ಇನ್ನಿತರ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಅವರು ಚಾಲನೆ ನೀಡಲಿದ್ದಾರೆ. ಪುತ್ಥಳಿ ಅನಾವರಣದ ಕಾರ್ಯಕ್ರಮ 12 ಜ್ಯೋತಿರ್ಲಿಂಗಗಳು, 4 ಶಂಕರಾಚಾರ್ಯರ ಮಠಗಳು, ದೇಶದ ಇತರ ದೇವಾಲಯಗಳಲ್ಲಿ ನೇರ ಪ್ರಸಾರವಾಗಲಿದೆ. ಇದನ್ನೂ ಓದಿ: ಪುನೀತ್ ಸಾವಿನ ಬೆನ್ನಲ್ಲೇ ಹೆಚ್ಚಾಯ್ತು ಇಸಿಜಿ, ಹೃದಯಸಂಬಂಧಿ ಟೆಸ್ಟ್‌ಗಳು
Prime Minister Narendra Modi pays obeisance to Lord Shiva at Kedarnath temple in Uttarakhand pic.twitter.com/V9gIdrrgTo
— ANI (@ANI) November 5, 2021
ಕೇದಾರನಾಥದಲ್ಲಿಯೇ ಶಂಕರಾಚಾರ್ಯರು ದೇಹತ್ಯಾಗ ಮಾಡಿದರು ಎಂಬ ನಂಬಿಕೆ ಇದೆ. ಹೀಗಾಗಿ ಪ್ರಧಾನಿ ಮೋದಿ ಶಂಕರಾಚಾರ್ಯರ ಸಮಾಧಿ ಸ್ಥಳವನ್ನು ಭಕ್ತರ ದರ್ಶನಕ್ಕೆ ಅನಾವರಣಗೊಳಿಸಲಿದ್ದಾರೆ. ಈ ವೇಳೆ ಕೇಂದ್ರ ಸಚಿವರು, ಸಂಸದರು ಮತ್ತು ಬಿಜೆಪಿಯ ಹಿರಿಯ ನಾಯಕರು ದೇಶದ 100ಕ್ಕೂ ಹೆಚ್ಚು ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.