ನವದೆಹಲಿ: ಇಂದು ಬೆಳಗ್ಗೆ 10 ಗಂಟೆಯಿಂದಲೇ ಆರಂಭವಾದ ರಾಷ್ಟ್ರಪತಿ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.
ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆಗೆ ಮತ ಚಲಾಯಿಸಲು ಈಗಾಗಲೇ ಸಂಸದರು ಸಂಸತ್ತಿನಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಸಂಸತ್ತಿನ ಆವರಣದಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು, ಅಲ್ಲಿ ಸಂಸದರು ಮತ ಚಲಾಯಿಸುತ್ತಿದ್ದಾರೆ. ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಈ ಚುನಾವಣೆಗೆ ಚುನಾವಣಾಧಿಕಾರಿಯಾಗಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ ಚಲಾಯಿಸಿದ್ದಾರೆ.
Advertisement
#WATCH Prime Minister Narendra Modi votes to elect new President, in Delhi#PresidentialElection pic.twitter.com/pm9fstL46T
— ANI (@ANI) July 18, 2022
ರಾಷ್ಟ್ರಪತಿ ಆಯ್ಕೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ.60ರಷ್ಟು ಮತಗಳೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ದ್ರೌಪದಿ ಮುರ್ಮು ಅವರ ಅಭ್ಯರ್ಥಿಗೆ ಹಲವಾರು ಪ್ರಾದೇಶಿಕ ಪಕ್ಷಗಳು ತಮ್ಮ ಬೆಂಬಲವನ್ನು ಘೋಷಿಸಿರುವುದರಿಂದ ಒಟ್ಟು ಮತಗಳಲ್ಲಿ ಸುಮಾರು 62 ಪ್ರತಿಶತದಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ದ್ರೌಪದಿ ಮುರ್ಮು ಗೆಲುವು ಸಾಧಿಸಿದರೇ 64 ವರ್ಷ ವಯಸ್ಸಿನ ಅವರು ಇದುವರೆಗೆ ಭಾರತದ ಅತ್ಯಂತ ಕಿರಿಯ ರಾಷ್ಟ್ರಪತಿಯಾಗಲಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಗಣಿ ಸ್ಫೋಟ- ಇಬ್ಬರು ಯೋಧರು ಹುತಾತ್ಮ
Advertisement
Advertisement
ಜುಲೈ 21 ರಂದು ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ನಾಮನಿರ್ದೇಶಿತ ಸದಸ್ಯರು, ರಾಜ್ಯ ವಿಧಾನಸಭೆಗಳು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಮತ ಚಲಾಯಿಸಲು ಅರ್ಹರಲ್ಲ. ಒಟ್ಟು 776 ಸಂಸತ್ ಸದಸ್ಯರು ಮತ್ತು 4,033 ಶಾಸಕರು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ. ಇದನ್ನೂ ಓದಿ: ಇಂದು ರಾಷ್ಟ್ರಪತಿ ಚುನಾವಣೆ – ಜು.25ಕ್ಕೆ ಪ್ರಮಾಣವಚನ