41 ಕಾರ್ಮಿಕರ ರಕ್ಷಣೆ ಬೆನ್ನಲ್ಲೇ ಭಾವುಕರಾಗಿದ್ದ ಪ್ರಧಾನಿ ಮೋದಿ

Public TV
1 Min Read
Narendra Modi Uttarakhand Tunnel Rescue

ನವದೆಹಲಿ: ಮಂಗಳವಾರ ತಡರಾತ್ರಿ ಉತ್ತರಕಾಶಿಯಲ್ಲಿ (Uttarkashi) ನಡೆಯುತ್ತಿದ್ದ ಕಾರ್ಮಿಕರ (Workers) ರಕ್ಷಣಾ ಕಾರ್ಯಚರಣೆ ನೇರ ಪ್ರಸಾರ ವೀಕ್ಷಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾರ್ಯಚರಣೆ ಯಶಸ್ವಿಯಾದ ಬಳಿಕ ಭಾವುಕರಾಗಿದ್ದರು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿದ್ದಾರೆ.

ಮಂಗಳವಾರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆಯುತ್ತಿತ್ತು. ಕ್ಯಾಬಿನೆಟ್ ಸಹದ್ಯೋಗಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಕಾರ್ಯಚರಣೆ ನೇರ ಪ್ರಸಾರವನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಸಿಕ್ಕಿಬಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ನಂತರ ಪ್ರಧಾನಿ ಭಾವುಕರಾದರು ಎಂದರು. ಇದನ್ನೂ ಓದಿ: ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ – ಸಂಪುಟ ಸಭೆಯಲ್ಲಿ ಮೋದಿ ಮಹತ್ವದ ನಿರ್ಧಾರ

ಸುರಂಗ ಕುಸಿತದ ಬಳಿಕ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ನಿರಂತರವಾಗಿ ದೂರವಾಣಿ ಮೂಲಕ ಮಾಹಿತಿ ಪಡೆಯುತ್ತಿದ್ದರು. ಪ್ರಧಾನಿ ಕಾರ್ಯಲಯದಿಂದ ಮೇಲ್ವಿಚಾರಣೆಗೆ ವಿಶೇಷ ತಂಡವನ್ನು ಕಳುಹಿಸಿದ್ದರು. ಕಾರ್ಮಿಕರ ರಕ್ಷಣೆ ಬಳಿಕ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಕಾರ್ಯಚರಣೆಯಲ್ಲಿ ಭಾಗಿಯಾದ ಎಲ್ಲರನ್ನು ಶ್ಲಾಘಿಸಿದ್ದರು. ಇದನ್ನೂ ಓದಿ: ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದು ನಿಷೇಧಿಸಲು ಮನವಿ- ಅರ್ಜಿದಾರರಿಗೆ ಹೈಕೋರ್ಟ್ ತರಾಟೆ

Share This Article