Bengaluru CityDistrictsKarnatakaLatestMain Post

ನ.11ಕ್ಕೆ ಬೆಂಗಳೂರಿಗೆ ಮೋದಿ – ಅಂದು ಏನೇನು ಕಾರ್ಯಕ್ರಮ ನಡೆಯುತ್ತೆ?

ಬೆಂಗಳೂರು: ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಬೆಂಗಳೂರಿಗೆ ಭೇಟಿ ನೀಡಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್‌ಪ್ರೆಸ್‍ಗೆ (Vande Bharat Express) ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ತಿಳಿಸಿದರು.

ನ.11ಕ್ಕೆ ಬೆಂಗಳೂರಿಗೆ ಮೋದಿ - ಅಂದು ಏನೇನು ಕಾರ್ಯಕ್ರಮ ನಡೆಯುತ್ತೆ?

ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ನವೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) 2ನೇ ಟರ್ಮಿನಲ್‍ನ ಉದ್ಘಾಟನೆಯನ್ನು ಮಾಡಲಿದ್ದಾರೆ. ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ಕುಂಟ ಅಂತ ರೇಗಿಸಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿ ಹತ್ಯೆಗೈದ ರಿಕ್ಷಾ ಚಾಲಕ

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬರುವ ಬಗ್ಗೆ 3-4 ಗಣ್ಯರ ಜೊತೆ ಈಗಾಗಲೇ ಚರ್ಚಿಸಲಾಗಿದ್ದು, ಅವರ ಬರುವಿಕೆಯ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರು ಖಾತ್ರಿಗೊಳಿಸಲಿದ್ದಾರೆ. ಬಂಡೆಮಠದ ಸ್ವಾಮೀಜಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಆದೇಶಿದ್ದು, ತನಿಖೆಯ ನಂತರ ಎಲ್ಲ ಸತ್ಯಗಳು ಹೊರ ಬೀಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

Live Tv

Leave a Reply

Your email address will not be published. Required fields are marked *

Back to top button