ಬೆಂಗಳೂರು: ಇದೇ ಜನವರಿ 19 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಅಂದು ಬೆಳಗ್ಗೆ 9:35 ಕ್ಕೆ ದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. 9:40 ಕ್ಕೆ ಕಲಬುರಗಿಯಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 12:10 ಕ್ಕೆ ಹೆಲಿಕಾಪ್ಟರ್ ಮೂಲಕ ಸೊಲ್ಲಾಪುರದಿಂದ ನಿರ್ಗಮಿಸಿ, ಮಧ್ಯಾಹ್ನ 1 ಗಂಟೆಗೆ ಕಲಬುರಗಿ ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಇದನ್ನೂ ಓದಿ: ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ – ನಾನೂ ಅಯೋಧ್ಯೆಗೆ ಹೋಗ್ತೀನಿ: ಲಕ್ಷ್ಮಿ ಹೆಬ್ಬಾಳ್ಕರ್
Advertisement
Advertisement
1:05 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 2:10 ಕ್ಕೆ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್ಗೆ ಆಗಮಿಸಲಿದ್ದಾರೆ. 2:15 ಕ್ಕೆ ಕೆಐಎಎಲ್ ನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಮಾಡಲಿದ್ದಾರೆ. 2:45 ಕ್ಕೆ ಭಟ್ಟರಮಾರನಹಳ್ಳಿಗೆ ತಲುಪಲಿದ್ದಾರೆ. ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ಲೋಕಾರ್ಪಣೆ ಮಾಡಲಿದ್ದಾರೆ.
Advertisement
Advertisement
ಮಧ್ಯಾಹ್ನ 3:45 ಕ್ಕೆ ಭಟ್ಟರ ಮಾರನಹಳ್ಳಿಯಿಂದ ನಿರ್ಗಮಿಸಲಿದ್ದಾರೆ. 3:55 ಕ್ಕೆ ಕೆಐಎಎಲ್‌ಗೆ ತಲುಪಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಕೆಐಎಎಲ್‌ನಿಂದ ಚೆನ್ನೆöÊಗೆ ನಿರ್ಗಮಿಸಲಿದ್ದಾರೆ. ಕರ್ನಾಟಕ ಪ್ರವಾಸ ಬಳಿಕ ಮೋದಿ ತಮಿಳುನಾಡು ಪ್ರವಾಸ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ಈ ಕೂಡಲೇ ಸರ್ಕಾರಿ ಬಂಗಲೆ ಖಾಲಿ ಮಾಡಿ – ಮಹುವಾ ಮೊಯಿತ್ರಾಗೆ ಸೂಚನೆ