ಬಾಗಲಕೋಟೆ: ಪ್ರಧಾನಿ ಮೋದಿ (Narendra Modi) ತಮ್ಮ ಭಾಷಣದ ವೇಳೆ ಫೋಟೋ (Photo) ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ (Letter) ಬರೆದಿದ್ದಾರೆ.
Advertisement
ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಅವರ ಚಿತ್ರ ಬಿಡಿಸಿ, ಸ್ಕೆಚ್ ನೀಡಿದ್ದ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಬಾಗಲಕೋಟೆಯ (Bagalkote) ಯುವತಿ ನಾಗರತ್ನ ಮೇಟಿ ಎಂಬ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಏ.29 ರಂದು ಪ್ರಧಾನಿ ಮೋದಿ ಲೋಕಸಭಾ ಚುನವಣಾ (Lok Sabha Election) ಪ್ರಚಾರಾರ್ಥವಾಗಿ ಬಾಗಲಕೋಟೆಗೆ ಆಗಮಿಸಿದ್ದರು. ಭಾಷಣ ಮಾಡುವ ವೇಳೆಗೆ ವೇದಿಕೆ ಎದುರಿಗೆ ತಮ್ಮ (ಮೋದಿ) ಹಾಗೂ ತಾಯಿಯ ಚಿತ್ರ ಬಿಡಿಸಿದ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಗಮನಿಸಿದ ಮೋದಿ, ಭಾಷಣದ ಮಧ್ಯೆಯೇ ಎಸ್‌ಪಿಜಿ ಸಿಬ್ಬಂದಿಗೆ ಹೇಳಿ ಆ ಫೋಟೋವನ್ನು ತರಿಸಿಕೊಂಡಿದ್ದರು. ಅಲ್ಲದೇ ಅದರಲ್ಲಿ ನಿನ್ನ ಹೆಸರು, ವಿಳಾಸ ಬರೆದು ಕಳುಹಿಸು ಮಗಳೇ, ನಾನು ನಿನಗೆ ಖಂಡಿತವಾಗಿಯೂ ಪತ್ರ ಕಳುಹಿಸುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ದೇವರಾಜೇಗೌಡ, ಪೀತಂ ಗೌಡ ಆಪ್ತರ ಮನೆ ಸೇರಿದಂತೆ ಹಾಸನದ 6 ಕಡೆ ಎಸ್‌ಐಟಿ ದಾಳಿ
Advertisement
Advertisement
ಯುವತಿಗೆ ಕೊಟ್ಟ ಮಾತಿನಂತೆ ಮೇ 5 ರಂದು ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಯುವತಿಗೆ ಮೋದಿಯವರ ಪತ್ರ ಪೋಸ್ಟ್ ಮೂಲಕ ತಲುಪಿದೆ. ಮೋದಿಯವರ ಪತ್ರದಲ್ಲಿ ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ. ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳು. ಇಂತಿ, ನಿಮ್ಮ ನರೇಂದ್ರ ಮೋದಿ ಎಂದು ಉಲ್ಲೇಖ ಮಾಡಿ ಮೋದಿ ಪತ್ರ ಬರೆದಿದ್ದಾರೆ. ಸದ್ಯ ಈ ಯುವತಿಗೆ ಮೋದಿ ಬರೆದಿರುವ ಪತ್ರ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಇದನ್ನೂ ಓದಿ: ಪಿಒಕೆಯಲ್ಲಿ ಹಿಂಸಾಚಾರ, ಗುಂಡಿನ ದಾಳಿಗೆ ಮೂವರು ಬಲಿ – ಮದರಸಾದ ಒಳಗಡೆ ಟಿಯರ್ ಗ್ಯಾಸ್ ಸಿಡಿಸಿದ ಸೇನೆ
Advertisement