ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರು ಬುಧವಾರ ಅಹಮದಾಬಾದ್‌ನ (Ahmedabad) ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈ ವರ್ಷ 99 ವಯಸ್ಸನ್ನು ಪೂರೈಸಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ವರದಿಗಳ ಪ್ರಕಾರ, ಪ್ರಧಾನಿ ಮೋದಿಯವರ ತಾಯಿಯ ಆರೋಗ್ಯ ಹದಗೆಟ್ಟಿದ್ದು, ಇದೀಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಬಳಿಕ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು.
ನಿನ್ನೆ ಮೈಸೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಂಜಿನ ದಟ್ಟನೆ – ವಿಮಾನ ಸಂಚಾರಕ್ಕೆ ಅಡಚಣೆ
ಪ್ರಹ್ಲಾದ್ ಮೋದಿ ಅವರನ್ನು ತಮ್ಮ ಕುಟುಂಬದೊಂದಿಗೆ ಚಿಕಿತ್ಸೆಗಾಗಿ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ಲಾನ್: ಅಶ್ವಥ್ ನಾರಾಯಣ್ ಘೋಷಣೆ