ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ತಾಯಿ ಹೀರಾಬೆನ್ ಮೋದಿ (Heeraben Modi) ವಿಧಿವಶರಾಗಿದ್ದಾರೆ.
ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಬುಧವಾರ ಅಹಮದಾಬಾದ್‌ನ (Ahmedabad)ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ಬೆಂಗಳೂರಿಗೆ ಬಂದಿಳಿದ ಅಮಿತ್ ಶಾ
ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ https://t.co/7dLUarH8Qz
— Basavaraj S Bommai (@BSBommai) December 30, 2022
ಹೀರಾಬೆನ್ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿಯವರು ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ್ದು, ತಾಯಿಯ ಅಂತಿಮ ದರ್ಶನ ಪಡೆಯಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.