ನವದೆಹಲಿ: ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಉಂಟಾದ ಭದ್ರತಾ ವೈಫಲ್ಯಕ್ಕೆ ಫಿರೋಜ್‍ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ನೇರ ಕಾರಣ. ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕರ್ತವ್ಯವನ್ನು ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್‍ಗೆ ಸಮಿತಿ ವರದಿ ಸಲ್ಲಿಸಿದೆ.
Advertisement
ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ರಚಿಸಿದ ವಿಶೇಷ ಸಮಿತಿಯೂ ತನ್ನ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠಕ್ಕೆ ಸಲ್ಲಿಸಿದೆ. ವರದಿಯಲ್ಲಿ ಪೊಲೀಸ್ ಭದ್ರತಾ ವೈಫಲ್ಯವನ್ನು ಕಟುವಾಗಿ ಟೀಕಿಸಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಭದ್ರತಾ ವೈಫಲ್ಯ -150 ಅಪರಿಚಿತರ ವಿರುದ್ಧ ಎಫ್‌ಐಆರ್
Advertisement
Advertisement
ವರದಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಫಿರೋಜ್‍ಪುರ ಎಸ್‍ಎಸ್‍ಪಿ ತನ್ನ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಸಾಕಷ್ಟು ಬಲ ಲಭ್ಯವಿದ್ದರೂ ಅವರು ಭದ್ರತೆ ನೀಡುವಲ್ಲಿ, ಪ್ರತಿಭಟನೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪ್ರಧಾನಿ ಮಾರ್ಗದ ಬಗ್ಗೆ 2 ಗಂಟೆಗಳ ಮೊದಲು ಅವರಿಗೆ ತಿಳಿಸಲಾಗಿದ್ದರೂ ಅವರು ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದು ಉಲ್ಲೇಖಿಸಿದೆ.
Advertisement
ವರದಿಯನ್ನು ಗಣನೆಗೆ ತೆಗೆದುಕೊಂಡಿದ್ದು, ಸಮಿತಿಯು ಪ್ರಧಾನಿಯ ಭದ್ರತೆಯನ್ನು ಬಲಪಡಿಸಲು ಕೆಲವು ಪರಿಹಾರ ಕ್ರಮಗಳನ್ನು ಸೂಚಿಸಿದ್ದು, ನಾವು ವರದಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದು ಸಿಜೆಐ ರಮಣ ವಿಚಾರಣೆ ವೇಳೆ ಹೇಳಿದರು. ಸಮಿತಿಯ ವರದಿಯ ಪರಿಷ್ಕೃತ ಪ್ರತಿಯನ್ನು ನೀಡುವಂತೆ ಕೇಳಿದ ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಲು ಪೀಠ ನಿರಾಕರಿಸಿತು. ಇದನ್ನೂ ಓದಿ: 5 ಫೋನ್‌ಗಳಲ್ಲಿ ಮಾಲ್‍ವೇರ್‌ಗಳು ಕಂಡು ಬಂದಿದೆ, ನಿರ್ದಿಷ್ಟವಾಗಿ ಪೆಗಾಸಸ್ ಎನ್ನಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್‍ಗೆ ತಜ್ಞರ ವರದಿ
ಕಳೆದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ವೈಫಲ್ಯ ಉಂಟಾಗಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ನ್ಯಾಯಾಲಯ ಮೇಲುಸ್ತುವಾರಿಯಲ್ಲಿ ವಿಶೇಷ ಸಮಿತಿ ರಚಿಸಿ ತನಿಖೆಗೆ ಸೂಚಿಸಿತ್ತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್‍ಗೆ ಸಹಕರಿಸಲು ಮತ್ತು ಪಂಜಾಬ್ ಪೊಲೀಸ್ ಮತ್ತು ವಿಶೇಷ ರಕ್ಷಣೆ (SPG) ಮತ್ತು ಇತರ ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳ ಅಧಿಕಾರಿಗಳಿಗೆ ಅಗತ್ಯ ನೆರವು ನೀಡುವಂತೆ ಪೀಠವು ನಿರ್ದೇಶನ ನೀಡಿತು.