ರಾಮನಗರ: ವಿಧಾನಸಭಾ ಚುನಾವಣಾ ರಣಕಣ ರಂಗೇರಿದೆ. ಪ್ರತಿದಿನ ಒಂದಿಲ್ಲೊಂದು ಬೆಳವಣಿಗೆಗಳು ನಡೆಯುತ್ತಿವೆ. ಮೂರು ಪಕ್ಷದ ನಾಯಕರು ಅಧಿಕಾರದ ಗದ್ದುಗೆ ಹಿಡಿಯಲೇಬೇಕೆಂದು ಪಣ ತೊಟ್ಟಿದ್ದು, ಜಿದ್ದಾ-ಜಿದ್ದಿಯಾಗಿ ಪ್ರಚಾರ ನಡೆಸುತ್ತಿದ್ದಾರೆ.
Advertisement
ಪ್ರಧಾನಿ ಮೋದಿ ಸಹ ನಿನ್ನೆಯಿಂದ ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಭಾನುವಾರ (ಏ.30) ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಣಕ್ಕಿಳಿದಿರುವ ಸಿ.ಪಿ ಯೋಗೇಶ್ವರ್ ಪರ ಪ್ರಚಾರ ನಡೆಸಲಿದ್ದಾರೆ. ಈ ಹೊತ್ತಿನಲ್ಲೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಮಗ ಹೆಚ್‌ಡಿಕೆ ಪರ ಪ್ರಚಾರಕ್ಕಿಳಿದಿದ್ದಾರೆ. ಇದನ್ನೂ ಓದಿ: ಅದಾನಿ ಸಮೂಹ ವಿರುದ್ಧದ ಹಿಂಡೆನ್‍ಬರ್ಗ್ ವರದಿ ತನಿಖೆ – 6 ತಿಂಗಳ ಕಾಲಾವಕಾಶ ವಿಸ್ತರಣೆಗೆ ಸೆಬಿ ಮನವಿ
Advertisement
Advertisement
ಭಾನುವಾರ ಚೆನ್ನಪಟ್ಟಣದ ಇಗ್ಗಲೂರಿನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ. ಅದಕ್ಕೂ ಮೊದಲು ಇಗ್ಗಲೂರು ಡ್ಯಾಮ್ ವೀಕ್ಷಣೆ ಮಾಡಿದ್ದಾರೆ. 1996 ರಲ್ಲಿ ನಿರ್ಮಿಸಲಾದ ಇಗ್ಗಲೂರು ಡ್ಯಾಮ್‌ಗೆ ಹೆಚ್.ಡಿ ದೇವೇಗೌಡ ಬ್ಯಾರೇಜ್ ಅಂತಾ ಹೆಸರಿಡಲಾಗಿದೆ. ಇದನ್ನೂ ಓದಿ: ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯದಲ್ಲಿ ದಾಳಿ ನಡೆಸುತ್ತಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ
Advertisement
ಇದೇ ವೇಳೆ ಮಾತನಾಡಿದ ದೇವೇಗೌಡರು, ಚನ್ನಪಟ್ಟಣ, ಬೇಲೂರಿಗೆ ಪ್ರಧಾನಿ ಮೋದಿ ಭೇಟಿ ಕೊಡುತ್ತಿರುವ ಬಗ್ಗೆ ನನಗೆ ಗೊತ್ತಿದೆ. ಚನ್ನಪಟ್ಟಣ ಕುಮಾರಸ್ವಾಮಿಯರ ಕರ್ಮ ಭೂಮಿ. ಅವರು ಮಂಡ್ಯ ಜಿಲ್ಲೆಯಲ್ಲಿ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಡವಿದ್ದರೂ, ನನ್ನ ಕರ್ಮಭೂಮಿಯಲ್ಲೇ ಚುನಾವಣೆಗೆ ನಿಲ್ಲುತ್ತೇನೆ ಎಂದು ಇಲ್ಲಿಯೇ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಚನ್ನಪಟ್ಟಣದಲ್ಲೇ ಅಂತಿಮವಾಗಿ ನನ್ನ ಪ್ರಾಣ ಬಿಡ್ತೀನಿ ಅನ್ನೋ ಮಾತನ್ನೂ ಹೆಚ್‌ಡಿಕೆ ಹೇಳಿದ್ದಾರೆ.
ಇಡೀ ಹಿಂದೂಸ್ತಾನದಲ್ಲಿ ಕುಮಾರಸ್ವಾಮಿ ಕೊಟ್ಟಂತಹ ಯೋಜನೆಗಳಿಲ್ಲ. ಆದ್ರೆ ಇಡೀ ಇಂಡಿಯಾದಲ್ಲಿ 60 ವರ್ಷ ಮೇಲ್ಪಟ್ಟ ರೈತರಿಗೆ ಪಿಂಚಣಿ ಘೋಷಿಸಿದ್ರೆ ಅದು ಕುಮಾರಸ್ವಾಮಿ ಮಾತ್ರ. 2 ಬಾರಿ ಸಂಕಷ್ಟದಲ್ಲೇ ಸಿಎಂ ಆದ್ರು. ಬಿಜೆಪಿ, ಕಾಂಗ್ರೆಸ್‌ನವರು ಕೊಟ್ಟ ನೋವನ್ನೆಲ್ಲಾ ಸಹಿಸಿಕೊಂಡರು. ಸಿದ್ದರಾಮಯ್ಯ ಕೈಯಲ್ಲಾಗಲಿಲ್ಲ, ಆದ್ರೆ ಕುಮಾರಸ್ವಾಮಿ ಸಾಲ ಮನ್ನಾ ಮಾಡಿದ್ರು. ಯಾರೋ ಏನೇ ಪ್ರಚಾರ ಮಾಡಿದ್ರೂ ಕುಮಾರಸ್ವಾಮಿಯನ್ನ ಚನ್ನಪಟ್ಟಣದ ಜನ ಬಿಟ್ಟುಕೊಡಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿವೆ. ಮೊದಲು ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರನನ್ನ ನಿಲ್ಲಿಸುತ್ತೇವೆ ಅಂತಾ ಹೇಳಿದ್ರು. ನಂತರ ಹಿಂದೇಟು ಹಾಕಿದ್ರು. ಇದರ ಅರ್ಥ ಏನು. ಪಂಚರತ್ನ ಯಾತ್ರೆಯ ಯಶಸ್ಸಿನಿಂದ ಎರಡೂ ರಾಷ್ಟ್ರೀಯ ಪಕ್ಷಗಳು ಏನೇನು ಮಾಡ್ತಿವೆ ಅಂತಾ ಗೊತ್ತಿದೆ ಎಂದಿದ್ದಾರೆ.