ರಾಂಚಿ: ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಶಾಲೆಯೊಂದರ ಪ್ರಾಂಶುಪಾಲರನ್ನು ಜಾರ್ಖಂಡ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Advertisement
ಶಾಲೆಯ ಹಾಸ್ಟೆಲ್‍ನಲ್ಲಿ ಉಳಿದುಕೊಂಡಿದ್ದ ಏಳು ವಿದ್ಯಾರ್ಥಿನಿಯರು ಪ್ರಾಂಶುಪಾಲರ ವಿರುದ್ಧ ಚೈಬಾಸಾ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಸಂತ್ರಸ್ತರ ದೂರಿನ ಮೇರೆಗೆ ಚೈಬಾಸಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: `ಅಗ್ನಿಪಥ್’ ಪ್ರತಿಭಟನೆ – ಸಿಕಂದರಾಬಾದ್ ಹಿಂಸಾಚಾರದ ಮಾಸ್ಟರ್ ಮೈಂಡ್ ಅರೆಸ್ಟ್
Advertisement
Advertisement
ಈ ಕುರಿತಂತೆ ಪ್ರತಿಕ್ರಿಯಿಸಿದ ಚೈಬಾಸಾ ಪೊಲೀಸರು, ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾಗಿದೆ. ಆತನ ಮೇಲೆ ಏಳು ವಿದ್ಯಾರ್ಥಿಗಳು ದೂರು ನೀಡಿದ್ದಾರೆ ಮತ್ತು ಎಲ್ಲಾ ಸಂತ್ರಸ್ತೆಯರು ಶಾಲೆಯ ಹಾಸ್ಟೆಲ್‍ನಲ್ಲಿ ಉಳಿದುಕೊಂಡಿದ್ದರು. ಇದೀಗ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಅಗ್ನಿಪಥ್ ಪ್ರತಿಭಟನೆಯ ಕಾವು- ಉತ್ತರದ ಬಳಿಕ ದಕ್ಷಿಣದಲ್ಲಿ ಹಿಂಸಾತ್ಮಕ ಪ್ರೊಟೆಸ್ಟ್