ಕೋಲಾರ: ವಸತಿ ಶಾಲೆಯಲ್ಲಿದ್ದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಾಂಶುಪಾಲರು ಗ್ರಾಮಸ್ಥರಿಗೆ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ರಾಜೇನಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಡರಾತ್ರಿ ನಡೆದಿದೆ.
ವಸತಿ ಶಾಲೆಯ ಪ್ರಾಂಶುಪಾಲರು ಅಕ್ರಮವಾಗಿ ಆಹಾರ ಪದಾರ್ಥಗಳನ್ನು ಸಾಗಿಸುತ್ತಿದ್ದರು. ಪದಾರ್ಥಗಳನ್ನು ಟೆಂಪೊಗೆ ಲೋಡ್ ಮಾಡಿ ಕಳಿಸುವ ವೇಳೆ ಪ್ರಾಂಶುಪಾಲ ಮಂಜುನಾಥ್ ಸೇರಿದಂತೆ ಇಬ್ಬರು ಗ್ರಾಮಸ್ಥರ ಕೈಗೆ ಸಾಕ್ಷಿ ಸಮೇತ ಸಿಕ್ಕಿ ಬಿದ್ದಿದ್ದಾರೆ. ಪ್ರಾಂಶುಪಾಲರು ಸೇರಿ ಮೂವರನ್ನು ಗ್ರಾಮಸ್ಥರು ಹಿಡಿದು ಕೂಡಿ ಹಾಕಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
ಹಲವು ದಿನಗಳಿಂದ ವಿದ್ಯಾರ್ಥಿಗಳಿಗೆ ಬರುತ್ತಿದ್ದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬರುತ್ತಿತ್ತು. ಆದ್ರೆ ಶುಕ್ರವಾರ ತಡರಾತ್ರಿ ಖಚಿತ ಮಾಹಿತಿ ಮೇರೆಗೆ ವಸತಿ ಶಾಲೆ ಮೇಲೆ ಗ್ರಾಮಸ್ಥರು ದಾಳಿ ಮಾಡಿದಾಗ ಅಕ್ರಮ ಬೆಳಕಿಗೆ ಬಂದಿದೆ. ಸದ್ಯ ಆರೋಪಿಗಳನ್ನು ಮಾಸ್ತಿ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Advertisement
Advertisement
ಕೆಲ ದಿನಗಳ ಹಿಂದಷ್ಟೇ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಈ ಸಂಬಂಧ ಪ್ರಾಂಶುಪಾಲರು ಸೇರಿದಂತೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv