ಡಿಸ್ಪುರ್: 13 ವರ್ಷದ ಬಾಲಕಿ ಪ್ರಾಂಶುಲೆ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ದುರ್ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ.
ಡಿಸೆಂಬರ್ 24 ರಂದು 8ನೇ ತರಗತಿ ವಿದ್ಯಾರ್ಥಿನಿಯು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಸಾವಿಗೆ ಕಾರಣವೇನು ಎಂದು ಬರೆದಿಟ್ಟು, ಶಾಲೆಯ ಐದನೇ ಮಹಡಿಯಿಂದ ಜಿಗಿದಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಭಾನುವಾರ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಜನತೆಯ ಹಿತದೃಷ್ಟಿಯಿಂದ ಕಠಿಣ ಕ್ರಮ: ಸುಧಾಕರ್ ಸಮರ್ಥನೆ
ಬಾಲಕಿ ಮೃತಪಟ್ಟ ನಂತರ ಪೋಷಕರು ಹಾಗೂ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪೋಷಕರ ಮುಂದೆಯೇ ಪ್ರಾಂಶುಪಾಲೆ ಬಾಲಕಿಯನ್ನು ಅವಮಾನಿಸಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸರು, ಶಾಲೆಯ ಪ್ರಾಂಶುಪಾಲೆ ಇನ್ನೊಬ್ಬ ವಿದ್ಯಾರ್ಥಿಯೊಂದಿಗಿನ ಪ್ರೇಮ ಸಂಬಂಧವಿದ್ದ ಕಾರಣ ಈ ಬಾಲಕಿಗೆ ಕಿರುಕುಳ ನೀಡುತ್ತಿದ್ದಳು. ಈ ಪರಿಣಾಮ ಬಾಲಕಿಗೆ ಆಕೆಯ ಕಿರುಕುಳ ಸಹಿಸಲಾಗದೇ ಸಾವನ್ನಪ್ಪಿದ್ದಾಳೆ ಎಂದರು. ಇದನ್ನೂ ಓದಿ: ಓಮಿಕ್ರಾನ್ ವೈರಸ್‍ಗೆ ಬೆಚ್ಚಿಬಿದ್ದ ಜನ – ಡಿಸೆಂಬರ್‌ನಲ್ಲಿ ಹೆಚ್ಚು ವ್ಯಾಕ್ಸಿನೇಷನ್
ಪೊಲೀಸರು ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ಪರೋಕ್ಷವಾಗಿ ಪ್ರಚೋದನೆ ನೀಡಿದ್ದಕ್ಕೆ ಪ್ರಾಂಶುಪಾಲೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಪ್ರಾಂಶುಪಾಲೆ ನಾಪತ್ತೆಯಾಗಿದ್ದು, ಆಕೆಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.