ಲಕ್ನೋ: ಹೊಸ ಸಮವಸ್ತ್ರಕ್ಕಾಗಿ ಅಳತೆ ತೆಗೆದುಕೊಳ್ಳಬೇಕು ಎಂದು ಹೇಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯನೊಬ್ಬ 6ನೇ ತರಗತಿಯ ಬಾಲಕಿಯನ್ನ ವಿವಸ್ತ್ರಗೊಳಿಸಿ ಲೈಂಗಿಕ ಕಿರುಕುಳ ನೀಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
Advertisement
ಇಲ್ಲಿನ ಜಬಲ್‍ಪುರ್ ಕತ್ರಿ ಬಂಜರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯ ಪೋಷಕರು ಸದಾರ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಖ್ಯೋಪಾಧ್ಯಾಯನನ್ನು ಬಂಧಿಸಿ ಜೈಲಿಗೆ ಕಳಿಸಲಾಗಿದೆ.
Advertisement
Advertisement
ಬಾಲಕಿಯ ತಂದೆ ದೂರು ನೀಡಿದ ಬಳಿಕ ಆರೋಪಿಯನ್ನ ಬಂಧಿಸಲಾಗಿದೆ ಎಂದು ಎಸ್‍ಪಿ ಕನೌಜ್ ಹರೀಶ್ ಚಂದ್ರ ಹೇಳಿದ್ದಾರೆ. ಮಂಗಳವಾರದಂದು ಬಾಲಕಿಯ ಪೋಷಕರು ಮುಖ್ಯೋಪಾಧ್ಯಾಯನ ವಿರುದ್ಧ ದೂರು ದಾಖಲಿಸಿದ್ದು, ಘಟನೆ ನಡೆದಾಗ ಬಾಲಕಿಯ ಜೊತೆ ಇದ್ದ ಶಾಲೆಯ ಇತರೆ ವಿದ್ಯಾರ್ಥಿನಿಯರು ಘಟನೆ ಬಗ್ಗೆ ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ.
Advertisement
ಪೊಲೀಸರು ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡಿದ್ದು, ಆಕೆಯನ್ನ ವೈದ್ಯಕೀಯ ಪರೀಕ್ಷೆಗೆ ಕಳಿಸಿದ್ದಾರೆ.