ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿರುವ 16ನೇ ಬಜೆಟ್‌ನಲ್ಲಿ ಕೊಡಗು ಜಿಲ್ಲೆಯ ವಿವಿಧ ಆಸ್ಪತ್ರೆಗಳ (Kodagu Hospitals) ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ.
ಈ ಬಾರಿ ಬಜೆಟ್‌ನಲ್ಲಿ (Karnataka Budget 2025) ರಾಜ್ಯದ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಒಟ್ಟು 650 ಕೋಟಿ ರೂ. ಘೋಷಿಸಲಾಗಿದೆ. ಈ ಪೈಕಿ ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗುವುದು, ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು ಹಾಗೂ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನಪರವಾದ ಅತ್ಯುತ್ತಮ ದಾಖಲೆಯ ಬಜೆಟ್ – ಕೆ.ಹೆಚ್ ಮುನಿಯಪ್ಪ
ಅಲ್ಲದೇ ಗೋಣಿಕೋಪ್ಪ, ವಿರಾಜಪೇಟೆ ಮಡಿಕೇರಿ ರಸ್ತೆ ಮತ್ತು ಸೇತುವೆ ಅಭಿವೃದ್ಧಿಗೆ 20 ಕೋಟಿ ರೂ. ವೆಚ್ಚದಲ್ಲಿ ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಿಂದ 7ನೇ ತರಗತಿ ಪ್ರಾರಂಭಿಸಲಾಗುವುದು. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಐದು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: Karnataka Budget 2025: ಯಾವ ಇಲಾಖೆಗೆ ಎಷ್ಟು ಹಣ ಹಂಚಿಕೆ?
2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ 20 ವಿದ್ಯಾರ್ಥಿನಿಲಯಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು. ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಸಂಸ್ಕರಿಸಲು ನೆರವಾಗುವಂತೆ ಲ್ಯಾಂಪ್ಸ್ (LAMPS) ಸಹಕಾರ ಸಂಘಗಳಿಗೆ ದುಡಿಯುವ ಬಂಡವಾಳ ರೂಪದಲ್ಲಿ ತಲಾ 5 ಲಕ್ಷ ರೂ. ಸಹಾಯಧನ ನೀಡಲಾಗುವುದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಈ ವರ್ಷ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ