– ಆದೇಶವನ್ನು ಪ್ರಶ್ನಿಸಲು ಮುಂದಾದ ಕಾರಾಗೃಹ ಇಲಾಖೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ (Pavithra Gowda) ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ.
ಜೈಲಿನಲ್ಲಿ (Jail) ವಿಚಾರಣಾಧೀನ ಕೈದಿಗಳಿಗೆ ಈ ರೀತಿಯಲ್ಲಿ ಮನೆ ಊಟವನ್ನು ನೀಡಿದರೆ ಮುಂದೆ ಎಲ್ಲಾ ಆರೋಪಿಗಳು ಇದೇ ಆದೇಶದ ಮೇಲೆ ಮನೆ ಊಟವನ್ನು ಕೇಳುವ ಸಾಧ್ಯತೆ ಇರುವುದರಿಂದ ಮನೆ ಊಟ ನೀಡದೇ ಇರಲು ಜೈಲಾಧಿಕಾರಿಗಳು ಮುಂದಾಗಿದ್ದಾರೆ.
ಯಾಕೆ ಈ ನಿರ್ಧಾರ?
ಮನೆ ಊಟ ಬಂದರೆ ಪರಿಶೀಲನೆ ಮಾಡಿದ ಬಳಿಕ ಜೈಲಿನ ಒಳಗೆ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ಪ್ರತ್ಯೇಕವಾಗಿ ತಂಡ ಬೇಕಾಗುತ್ತದೆ. ಪರಪ್ಪನ ಅಗ್ರಹಾರದಲ್ಲಿ ಇರುವ 3 ಸಾವಿರ ಆರೋಪಿಗಳು ಇದೇ ಆದೇಶದ ಮೇಲೆ ಅರ್ಜಿ ಹಾಕಿದ್ದರೆ ಕಷ್ಟ ಆಗುತ್ತದೆ. ಹೀಗಾಗಿ ಮನೆ ಊಟ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲು ಕಾರಾಗೃಹ ಇಲಾಖೆ ನಿರ್ಧಾರ ಮಾಡಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ – 24 ಗಂಟೆಯಲ್ಲಿ ಎರಡನೇ ಕಗ್ಗೊಲೆ

