ಬೆಂಗಳೂರು: ಖಾಸಗಿ ಬಸ್ ಪಲ್ಟಿಯಾಗಿ 8 ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಳವಳ್ಳಿ ಕಟ್ಟೆ ಮೇಲೆ ನಡೆದಿದೆ. ಈ ಬಸ್ ದುರಂತಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ.
ತುಮಕೂರು ಜಿಲ್ಲೆಯ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಎಂಟು ಪ್ರಯಾಣಿಕರು ಸಾವನ್ನಪ್ಪಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ದುರಂತದಲ್ಲಿ ಸಾವನ್ನಪ್ಪಿದವರಿಗೆ ದೊಡ್ಡ ಪ್ರಮಾಣದ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಅವರಿಗೂ ಪರಿಹಾರ ಕೊಡಬೇಕು.
Advertisement
ಈ ಬಗ್ಗೆ ಸರಕಾರ ಕಠಿಣ ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.
ದುರಂತದಲ್ಲಿ ಜೀವ ಕಳೆದುಕೊಂಡ ಎಲ್ಲ ಅಮೂಲ್ಯ ಜೀವಗಳಿಗೆ ನನ್ನ ಶ್ರದ್ಧಾಂಜಲಿ ಹಾಗೂ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. 5/5
— H D Kumaraswamy (@hd_kumaraswamy) March 19, 2022
ಖಾಸಗಿ ಬಸ್‍ಗಳ ಗುಣಮಟ್ಟ, ಪರವಾನಗಿ, ತಾಂತ್ರಿಕ ಕ್ಷಮತೆ, ವೇಗದ ಚಾಲನೆ ಇತ್ಯಾದಿಗಳ ಬಗ್ಗೆ ನಿರಂತರವಾಗಿ ದೂರು ಬರುತ್ತಲೇ ಇದ್ದರೂ ಸರ್ಕಾರವು ನಿರ್ಲಕ್ಷ್ಯ ಧೋರಣೆಯಲ್ಲೇ ಇದೆ. ಗ್ರಾಮೀಣ ಸಾರಿಗೆಯನ್ನು ಉತ್ತಮಪಡಿಸುವ ಸರ್ಕಾರದ ಮಾತುಗಳು ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ. ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಬಸ್ಸಿನ ಟಾಪ್ ಮೇಲೆಯೇ 40ಕ್ಕೂ ಹೆಚ್ಚು ಪ್ರಯಾಣಿಕರು ಕೂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ ಎಂದು ಟ್ವೀಟ್ ಮಾಡಿದ್ದಾರೆ. ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು
Advertisement
ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಬಸ್ಸಿನ ಟಾಪ್ ಮೇಲೆಯೇ 40ಕ್ಕೂ ಹೆಚ್ಚು ಪ್ರಯಾಣಿಕರು ಕೂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ. 4/5
— H D Kumaraswamy (@hd_kumaraswamy) March 19, 2022
ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ. ಈ ಬಗ್ಗೆ ಸರಕಾರ ಕಠಿಣ ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ದುರಂತದಲ್ಲಿ ಜೀವ ಕಳೆದುಕೊಂಡ ಎಲ್ಲ ಅಮೂಲ್ಯ ಜೀವಗಳಿಗೆ ನನ್ನ ಶ್ರದ್ಧಾಂಜಲಿ ಹಾಗೂ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.