ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಅಪಘಾತ- ವಿದ್ಯಾರ್ಥಿ ದುರ್ಮರಣ

Public TV
1 Min Read
MDK 1

ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಅಪಘಾತಕ್ಕೀಡಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಡೆದಿದೆ.

ಈ ಘಟನೆ ಇಂದು ನಸುಕಿನ ಜಾವ 2.30ರ ಸುಮಾರಿಗೆ ನಡೆದಿದೆ. ಬಳ್ಳಾರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಹೊತ್ತ ಖಾಸಗಿ ಬಸ್ ಮಡಿಕೇರಿ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಅಪಘಾತದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿ ಬಸವರಾಜು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಮಡಿಕೇರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ಸಿನ ಚಾಲಕ ಹಾಗೂ ಅಡುಗೆ ಸಿಬ್ಬಂದಿಯನ್ನು ಮಂಗಳೂರಿಗೆ ರವಾನೆ ಮಾಡಲಾಗಿದೆ.

MDK ACCIDENT AV 7 e1546053856272

ಅಪಾಯದಿಂದ ಪಾರಾದ ವಿದ್ಯಾರ್ಥಿಗಳಿಗೆ ಸುಂಟಿಕೊಪ್ಪ ರಾಮ ಮಂದಿರದಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸ್ಥಳಕ್ಕೆ ಕೊಡಗು ಎಸ್ ಪಿ ಸುಮಾನ್ ಪನ್ನೇಕರ್ ಡಿವೈಎಸ್‍ಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೇಗೆ ಅಪಘಾತಕ್ಕೀಡಾಯ್ತು? ಅಪಘಾತಕ್ಕೆ ಕಾರಣವೇನು ಎಂಬುದಾಗಿ ತಿಳೀದುಬಂದಿಲ್ಲ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *