ತುಮಕೂರು: ಖಾಸಗಿ ಬಸ್ (Private Bus) ಹಾಗೂ ಕಾರು (Car) ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ತುಮಕೂರು (Tumakuru) ಜಿಲ್ಲೆ ಕೊರಟಗೆರೆ (Koratagere) ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲ್ಲಿ (Vaddarahalli) ನಡೆದಿದೆ.
ಖಾಸಗಿ ಬಸ್ ಇರಕಸಂದ್ರ ಕಾಲೋನಿಯಿಂದ ಕೋಳಾಲ ಕಡೆಗೆ ತೆರಳುತ್ತಿದ್ದ ಸಂದರ್ಭ ಬೆಂಗಳೂರು ಕಡೆಯಿಂದ ಅಕ್ಕಿರಾಂಪುರಕ್ಕೆ ತೆರಳುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ: ಇವತ್ತಾದರೂ ಸಿಗತ್ತಾ ಬೇಲ್?
ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಹೊಸೂರು ಹೈವೇಯಲ್ಲಿ ಹೊತ್ತಿ ಉರಿದ ಕ್ರೇಟಾ ಕಾರು