ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ವೊಂದು ಕೆರೆಗೆ ಉರುಳಿ ಬಿದ್ದ ಘಟನೆ ಹುಬ್ಬಳ್ಳಿ ಹೊರವಲಯದ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವರೂರ ಕ್ರಾಸ್ ಬಳಿ ನಡೆದಿದೆ.
ವರೂರ ಕ್ರಾಸ್ ಬಳಿ ಇರುವ ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರ ಫಾರ್ಮ್ ಹೌಸ್‍ನ ಕೆರೆಗೆ ಖಾಸಗಿ ಬಸ್‍ವೊಂದು ಉರುಳಿ ಬಿದ್ದಿದೆ. ಈ ಬಸ್ ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಬಸ್ ನಲ್ಲಿದ್ದ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.