ಚಿತ್ರದುರ್ಗ: ಖಾಸಗಿ ಬಸ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ನಡೆದಿದೆ.
ಈ ಅಪಘಾತದಿಂದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಆಂಧ್ರಪ್ರದೇಶದ ಅನಂತಪುರದಿಂದ ಚಿತ್ರದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಬಾಲೇನಹಳ್ಳಿ ಬಳಿ ವೇಗವಾಗಿ ಬಂದ ಲಾರಿ, ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಪಲ್ಟಿಯಾಗಿದೆ.
ಬಸ್ ಪಲ್ಟಿಯಾಗಿದ್ದರಿಂದ ಸ್ಥಳದಲ್ಲಿದ್ದವರು ತಕ್ಷಣ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯಕ್ಕೆ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದಂತಾಗಿದೆ.