ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕೆರೆ ಏರಿ ಮೇಲಿಂದ ಕೆಳಗೆ ಉರುಳಿ ಬಿದ್ದ ಘಟನೆ ಬೆಂಗಳೂರು ಹೊರವಲಯ ಆನೇಕಲ್‍ನಲ್ಲಿ (Anekal) ನಡೆದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ- ಸರ್ಜಾಪುರ ಮುಖ್ಯ ರಸ್ತೆಯ ಬಿದರಗುಪ್ಪೆ ಕೆರೆ ಏರಿ ಮೇಲೆ ಘಟನೆ ನಡೆದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಹಿಂದೆ ಬಿಜೆಪಿ ಕೈವಾಡ: ಸಚಿವ ತಂಗಡಗಿ
Advertisement
Advertisement
ಖಾಸಗಿ ಬಸ್ ಚಿಕ್ಕ ಬೆಳಂಡೂರಿನಿಂದ ಓಂ ಶಕ್ತಿಗೆ ಹೋಗುತ್ತಿತ್ತು. ಈ ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣ ಮಾಡುತ್ತಿದ್ದರು. ಕೆರೆ ಏರಿ ಮೇಲೆ ಬರುತ್ತಿದ್ದಾಗ ಬಸ್ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಬಸ್ಸಿನಲ್ಲಿದ್ದ ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement
ಕೆರೆ ಏರಿ ಮೇಲಿನ ಇನ್ನೊಂದು ಭಾಗದಲ್ಲಿ ಸಂಪೂರ್ಣವಾಗಿ ಕೆರೆಯಲ್ಲಿ ನೀರು ತುಂಬಿತ್ತು. ಎಡಬದಿಗೆ ಬಸ್ ಬಿದ್ದಿದ್ದರಿಂದ ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ. ಅತ್ತಿಬೆಲೆ ಪೊಲೀಸ್ (Attibele Police Station) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ತ್ರಿಷಾ ಪ್ರಕರಣ: ಮನ್ಸೂರ್ ಅಲಿಖಾನ್ ಗೆ ದಂಡ ವಿಧಿಸಿದ ಹೈಕೋರ್ಟ್