ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ (Bus) ಪಲ್ಟಿಯಾದ ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ತುಮಕೂರು (Tumakuru) ಜಿಲ್ಲೆ ಕುಣಿಗಲ್ (Kunigal) ತಾಲೂಕಿನ ಹೇರೂರು ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಬಸ್ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಬಸ್‌ನಲ್ಲಿ ಒಟ್ಟು 24 ಜನ ಪ್ರಯಾಣಿಕರು ಇದ್ದರು. ಬಸ್ ಪಲ್ಟಿಯಿಂದಾಗಿ 5 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ
ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Champions Trophy 2025 | ಟಾಸ್‌ಗೆದ್ದ ಪಾಕ್ ಬ್ಯಾಟಿಂಗ್ ಆಯ್ಕೆ