ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ (Private Bus) ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆ ಬ್ಯಾಡಗಿ (Byadagi) ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಖಾಸಗಿ ಬಸ್ ಬೆಂಗಳೂರಿನಿಂದ ಪುಣೆ ಕಡೆ ಹೊರಟಿತ್ತು. ಪಲ್ಟಿಯಾದ ಪರಿಣಾಮ ಬಸ್ ಅಡಿ ಸಿಲುಕಿದ್ದ ಪ್ರಯಾಣಿಕನನ್ನ ಹೊರಗಡೆ ತೆಗೆಯಲು ಅಂಬುಲೆನ್ಸ್ ಸಿಬ್ಬಂದಿ ಹಾಗೂ ಸ್ಥಳೀಯರು ಹರಸಹಾಸಪಡಬೇಕಾಯಿತು. ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಪ್ರಯಾಣಿಕನನ್ನು ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಪೊಲೀಸ್ ಕಾನ್ಸ್ಟೇಬಲ್ಗೆ 5 ವರ್ಷ ಜೈಲು ಶಿಕ್ಷೆ
ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಶಾಸಕ ದರ್ಶನ್ ಧ್ರುವನಾರಾಯಣ್ ಮದುವೆ ಸಂಭ್ರಮ – ಜಾನಪದ ಲೋಕದಲ್ಲಿ ಇಂದು ಮಂತ್ರಮಾಂಗಲ್ಯ
