ಕೋಲಾರ: ಖಾಸಗಿ ಬಸ್ (Private Bus) ಡಿವೈಡರ್‌ಗೆ (Divider) ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ (Srinivaspur) ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ ನಸುಕಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಹರಿತ ಟ್ರಾವೆಲ್ಸ್‌ನ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ರಭಸಕ್ಕೆ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಪೊದುಟೂರು ಮೂಲದ ಅನಿತಾ (58) ಮೃತ ಮಹಿಳೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಭಾರತೀಯ ನಾಗರಿಕರ ಅಗತ್ಯಗಳನ್ನು ಬಲಿಕೊಟ್ಟು ವಲಸಿಗರಿಗೆ ದೇಶದ ಸಂಪನ್ಮೂಲ ಬಳಸಿಕೊಳ್ಳಲು ಅವಕಾಶ ನೀಡಬೇಕೇ: ಸುಪ್ರೀಂ ಪ್ರಶ್ನೆ
ಖಾಸಗಿ ಬಸ್ ಆಂದ್ರಪ್ರದೇಶದ ಬದ್ವೆಲ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್‌ನ ಚಕ್ರಗಳು ಬೇರ್ಪಟ್ಟಿದೆ. ಗಾಯಾಳುಗಳನ್ನು ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಶ್ರೀನಿವಾಸಪುರ, ಕೋಲಾರ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ರಾಯಲ್ಪಾಡು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ – ನಿಯಂತ್ರಣ ತಪ್ಪಿ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ

