ತುಮಕೂರು: ಖಾಸಗಿ ಬಸ್‌ವೊಂದು ಪಲ್ಟಿಯಾದ ಪರಿಣಾಮ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ತುಮಕೂರು (Tumakuru) ಜಿಲ್ಲೆ ಶಿರಾ (Sira) ತಾಲೂಕಿನ ಚಿಕ್ಕನಹಳ್ಳಿ ಬ್ರಿಡ್ಜ್ (Chikkanahalli Bridge) ಬಳಿ ನಡೆದಿದೆ.
ಸೋಮವಾರ ಬೆಳಗಿನ ಜಾವ 4:15ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಿಕ್ಕನಹಳ್ಳಿ ಬಳಿ ನಿರ್ಮಾಣವಾಗಿರುವ ನೂತನ ಬ್ರಿಡ್ಜ್ ಮೇಲೆ ಘಟನೆ ನಡೆದಿದೆ. ಇದನ್ನೂ ಓದಿ: ಮುಂದಿನ ಸಲ ಯತ್ನಾಳ್‌ಗೆ ಸೋಲು ಖಚಿತ – ಸೋಲದಿದ್ರೆ ಮಠ ತ್ಯಾಗ: ಹುಲಸೂರು ಶ್ರೀ ಬಹಿರಂಗ ಸವಾಲ್
ಬಸ್‌ನಲ್ಲಿ ಒಟ್ಟು 29 ಜನ ಪ್ರಯಾಣಿಸುತ್ತಿದ್ದು, ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಶಿರಾ, ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Bengaluru| ಮಳೆಗೆ ಕಮ್ಮನಹಳ್ಳಿಯಲ್ಲಿ ಹೊತ್ತಿ ಉರಿದ ಟ್ರಾನ್ಸ್‌ಫಾರ್ಮರ್