– 15ಕ್ಕೂ ಹೆಚ್ಚು ಪ್ರಯಾಣಿಕರು ಪಾರು
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ (Ankola) ತಾಲೂಕಿನ ಅವರ್ಸಾ ಕವಲಗದ್ದ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಖಾಸಗಿ ಬಸ್‌ವೊಂದು (Private Bus) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ಬೆಂಗಳೂರಿನಿಂದ ಗೋವಾ ಕಡೆಗೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಉರುಳಿದ ವೇಳೆ ಅಲ್ಲೇ ಇದ್ದ ಮರಕ್ಕೆ ಅಡ್ಡವಾಗಿ ಸಿಲುಕಿ ನಿಂತಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ: ಇಬ್ಬರಲ್ಲಿ ಕೋಟೆಯಿಂದ ತಳ್ಳಿದವರ‍್ಯಾರು? – ಸುಳ್ಳು ಪತ್ತೆ ಪರೀಕ್ಷೆಗೆ ಒಪ್ಪಿದ ಸಿಯಾ
ಅಪಘಾತದ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ಬರ ಪರಿಸ್ಥಿತಿ ಗಂಭೀರವಾಗ್ತಿದೆ, ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ – ರೈತರಿಗೆ ಡಿಕೆಶಿ ಮನವಿ
ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದು ಹಾಗೂ ಮರ ತಡೆಯಾಗಿ ನಿಂತಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಚೌಟ್ರಿಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ – ಹೆಚ್‌ಡಿಕೆ ವಿಡಿಯೋ ರಿಲೀಸ್ ಬೆನ್ನಲ್ಲೇ ಡಿಕೆಶಿ ವಾರ್ನಿಂಗ್
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಬೃಹತ್ ಕಲ್ಲು ಕ್ವಾರಿ ದುರಂತ – ಹಿಟಾಚಿ ಯಡವಟ್ಟಿನಿಂದ 7 ಕಾರ್ಮಿಕರು ಬಲಿ, ಗಣಿ ಮಾಲೀಕರ ವಿರುದ್ಧ FIR
