ದಕ್ಷಿಣ ಕನ್ನಡದಲ್ಲಿ ಬಂದ್‍ಗೆ ಬೆಂಬಲ ನೀಡದ ಖಾಸಗಿ ಬಸ್ ಮಾಲೀಕರು

Public TV
1 Min Read
City Bus Mangalore

ಮಂಗಳೂರು: ಮಂಗಳವಾರ ಹಾಗೂ ಬುಧವಾರ ದೇಶಾದ್ಯಂತ ನಡೆಯಲಿರುವ ಕಾರ್ಮಿಕರ ಮುಷ್ಕರಕ್ಕೆ ದಕ್ಷಿಣ ಕನ್ನಡದ ಖಾಸಗಿ ಬಸ್ ಮಾಲೀಕರು ಬೆಂಬಲ ನೀಡದೇ ಇರುವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.

ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಒಟ್ಟು ಹನ್ನೇರಡು ಬೇಡಿಕೆ ಮುಂದಿಟ್ಟು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ನೀಡುತ್ತಿದ್ದಾರೆ. ಆದರೆ ದಕ್ಷಿಣ ಕನ್ನಡದ ಖಾಸಗಿ ಬಸ್ ಮಾಲೀಕರು ಮುಷ್ಕರಕ್ಕೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

mng bharath bund 1

ಕಾರ್ಮಿಕ ಸಂಘಟನೆಗಳಿಂದ ರಾಷ್ಟ್ರವ್ಯಾಪಿ ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಇಂದು ಖಾಸಗಿ ಬಸ್ ಮಾಲಿಕರು ಸಭೆ ನಡೆಸಿದರು. ಈ ವೇಳೆ ಮುಷ್ಕರಕ್ಕೆ ನಮ್ಮ ಬೆಂಬಲ ಇಲ್ಲ. ಮಂಗಳೂರಿನಲ್ಲಿ ಎಂದಿನಂತೆ ಖಾಸಗಿ ಬಸ್ ಸಂಚಾರ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಕಾರ್ಮಿಕರ ಮುಷ್ಕರಕ್ಕೆ ಕಮ್ಯುನಿಸ್ಟ್ ಬೆಂಬಲಿತ ಕಾರ್ಮಿಕ ಸಂಘಟನೆಗಳಿಂದ ಮಾತ್ರ ಬೆಂಬಲ ವ್ಯಕ್ತವಾಗಿದೆ. ಬೀದಿ ಬೀದಿ ವ್ಯಾಪಾರಸ್ಥರ ಸಂಘದಿಂದ ಕೂಡ ಬಂದ್‍ಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದೆ. ಅಷ್ಟೇ ಅಲ್ಲದೆ ನಾಳಿನ ಪರಿಸ್ಥಿತಿಯ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಇತರೇ ಸಂಘಟನೆಗಳು ಮುಂದಾಗಿದೆ.

mng bharth bund 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *