ಹಾವೇರಿ: ಲಾರಿ ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಬ್ರಿಡ್ಜ್ ಮೇಲಿನಿಂದ ಪಲ್ಟಿ ಹೊಡೆದು ಬಸ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಬಳಿ ಇರೋ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಬೆಂಳೂರಿನಿAದ ಗೋಕಾಕಿನತ್ತ ಹೊರಟಿದ್ದ ಈ ಸ್ಲೀಪರ್ ಬಸ್‌ನಲ್ಲಿ ಒಟ್ಟು 32 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಬ್ರಿಡ್ಜ್ ಮೇಲಿನಿಂದ ಖಾಸಗಿ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಹಾಗೂ ಹದಿನೈದು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಅರ್ಧ ಗಂಟೆ ಕಾಲ ಕಾರ್ಯಚರಣೆ ನಡೆಸಿ ಹೊರಗೆ ತೆಗೆದರು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹೆಚ್ಚುವರಿ ಎಸ್ಪಿ ವಿಜಯಕುಮಾರ, ಡಿವೈಎಸ್ಪಿ ಶಂಕರ ಮಾರಿಹಾಳ ಪರಿಶೀಲನೆ ನಡೆಸಿದರು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ನೀಡಿರೋ ನೋಟಿಸ್ ಹಿಂತೆಗೆದುಕೊಳ್ಳಿ – ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ