ಚಿಕ್ಕಮಗಳೂರು: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಏಕಾಏಕಿ ಖಾಸಗಿ ಬಸ್ (Private Bus) ಹರಿದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಉಳಿದ ಮಕ್ಕಳು ಪಾರಾದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ (Tarikere) ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ.
ಘಟನೆಯಿಂದ ಗಾಯಗೊಂಡಿದ್ದ ತುಳಸಿ (15) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೋರ್ವ ಬಾಲಕಿ ನಿವೇದಿತ (14) ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ (Shivamogga) ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಓವರ್ ಸ್ಪೀಡ್‌ನಿಂದ (Over Speed) ನಿಯಂತ್ರಣ ತಪ್ಪಿದ ಖಾಸಗಿ ಬಸ್ ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಇದನ್ನೂ ಓದಿ: ವೃದ್ಧೆಯನ್ನು ಸೆಕ್ಸ್‌ಗೆ ಪೀಡಿಸಿದ್ದ ಆರೋಪ- ಯುವಕ ಅರೆಸ್ಟ್
ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂ ಆಗಿದೆ. ಅಧಿಕ ವೇಗದ ಖಾಸಗಿ ಬಸ್‌ಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್ಸಿನ ಮೇಲೆ ಕಲ್ಲು ತೂರಾಟ ಮಾಡಿ ಬಸ್‌ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಲಿವಿಂಗ್ ಪಾರ್ಟ್ನರ್ ಮೇಲೆ ಸಂಶಯ- ಯುವತಿಯಿಂದ ಯುವಕನ ಹತ್ಯೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]