ಬೆಂಗಳೂರು: ಬೆಳ್ಳಂಬೆಳಗ್ಗೆ ಖಾಸಗಿ ಬಸ್ವೊಂದು ಮನೆಯ ಕಾಂಪೌಂಡ್ಗೆ ಗುದ್ದಿದ ಘಟನೆ ನಗರದ ಜಾಲಹಳ್ಳಿ ಅಯ್ಯಪ್ಪ ಟೆಂಪಲ್ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ.
ಬಸ್ ಜಾಲಹಳ್ಳಿ ಕಡೆ ಬರುತ್ತಿದ್ದ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡು ಮನೆಯೊಂದರ ಕಾಂಪೌಂಡ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಬಸ್ನ ಮುಂಭಾಗ ನಜ್ಜುಗುಜ್ಜಾಗಿದೆ. ಬಸ್ನಲ್ಲಿ ಪ್ರಯಾಣಿಕರಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್
ಘಟನೆ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಫೆಡರಲ್ ಮೊಗಲ್ ಕಂಪನಿಗೆ ಸೇರಿದ ಬಸ್ ಇದಾಗಿದ್ದು, ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಎನ್ಕೌಂಟರ್ – ಮೂವರು ಲಷ್ಕರ್ ಉಗ್ರರ ಹತ್ಯೆ