– ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ದುರಂತ
– ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್ಸು
ಹೈದರಾಬಾದ್: ಆಂಧ್ರದ ಕರ್ನೂಲ್ (Kurnool) ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Hydearbad-Bengaluru) ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.
ಕಾವೇರಿ ಹೆಸರಿನ ವೋಲ್ವೋ ಬಸ್ಸಿನಲ್ಲಿ 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಶುಕ್ರವಾರ ಬಳಗಿನ ಜಾವ 3 ಗಂಟೆಯ ವೇಳೆಗೆ ವೇಗವಾಗಿ ಬಂದ ಬೈಕ್ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಬೈಕ್ ಬಸ್ಸಿನ ಕೆಳಗಡೆಯಿಂದ ಮುಂದಕ್ಕೆ ಹೋಗಿ ಇಂಧನ ಟ್ಯಾಂಕ್‌ಗೆ ಬಡಿದಿದೆ. ಹಿಂಭಾಗದಲ್ಲಿರುವ ಇಂಧನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಬಡಿದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿದೆ.
Hyderabad to Bangalore bound bus catches fire in Kurnool
25 feared dead
At least 25 people believed to be charred to death after a private travel bus caught fire in near Chinnatekuru Kurnool early Friday. The Kaveri Travels bus was travelling from Hyderabad to Bengaluru when… pic.twitter.com/zFDIfibt7J
— Sudhakar Udumula (@sudhakarudumula) October 24, 2025
ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಪಾರಾದರೂ ಕನಿಷ್ಠ 25 ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಣಿಕರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಹೈದರಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದವು. ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟುಹೋಗಿತ್ತು. ಈಗ ಅಧಿಕಾರಿಗಳು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕೆಲಸ ಆರಂಭಿಸಿದ್ದಾರೆ.
I am shocked to learn about the devastating bus fire accident near Chinna Tekur village in Kurnool district. My heartfelt condolences go out to the families of those who have lost their loved ones. Government authorities will extend all possible support to the injured and…
— N Chandrababu Naidu (@ncbn) October 24, 2025
ಸ್ಲೀಪರ್ ಕೋಚ್ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
VIDEO | Private bus catches fire in Andhra Pradesh’s Kurnool, killing 12. TDP MP Byreddy Shabari said:
“This bus caught fire in minutes. We could save about 19 people. They have been admitted to the hospital. We couldn’t identify the rest of the people because their bodies were… pic.twitter.com/yfaPyjdsTe
— Press Trust of India (@PTI_News) October 24, 2025

