ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಮಸೂದೆಯನ್ನು ಜಾರಿಗೆ ತರದಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘವು ದೇಶದಾದ್ಯಂತ ಶನಿವಾರ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಗೆ ಕರೆ ಕೊಟ್ಟಿವೆ.
ಕೇಂದ್ರ ಸರ್ಕಾರದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಒಂದು ದಿನ ಸಾಂಕೇತಿಕ ಮುಷ್ಕರ ನಡೆಯಲಿದೆ. ಹೀಗಾಗಿ ಅಂದು ತುರ್ತು ಸೇವೆ ಹೊರತುಪಡಿಸಿ, ಉಳಿದ ಒಪಿಡಿ, ಪ್ರಯೋಗಾಲಯ ಸೇರಿದಂತೆ ವೈದ್ಯಕೀಯ ಸೇವೆ ಅಲಭ್ಯವಾಗಲಿದೆ.
Advertisement
ಎನ್‍ಎಂಸಿ ಮಸೂದೆ ಕೈ ಬಿಡುವಂತೆ ಒತ್ತಾಯಿಸಿ ವೈದ್ಯರು ಈ ಹಿಂದೆಯೂ ಸಾಕಷ್ಟು ಬಾರಿ ಹೋರಾಟ ಕೈಗೊಂಡಿದ್ದರು. ಈಗ ಮತ್ತೆ ಹೋರಾಟ ತೀವ್ರಗೊಳಿಸಲು ನಿರ್ಧಾರ ಕೈಗೊಂಡಿದ್ದಾರೆ.
Advertisement
ಏನಿದು ಎನ್‍ಎಂಸಿ ಮಸೂದೆ?: ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರ ಹಾಗೂ ವೈದ್ಯ ವೃತ್ತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ‘ರಾಷ್ಟ್ರೀಯ ವೈದ್ಯಕೀಯ ಆಯೋಗ-2017’ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈಗಿರುವ ಭಾರತೀಯ ವೈದ್ಯಕೀಯ ಪರಿಷತ್ (ಎಂಸಿಐ) ಅನ್ನು ವಿಸರ್ಜಿಸಿ ಅದರ ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವುದು ಈ ವಿಧೇಯಕದ ಪ್ರಮುಖ ಉದ್ದೇಶವಾಗಿದೆ.