ದಾವಣಗೆರೆ: ಖಾಸಗಿ ಶಿಕ್ಷಕನಿಗೆ ವಂಚಕರು ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್‌ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ (America) ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಇದನ್ನೂ ಓದಿ: ನಿಮ್ಮಿಂದ ನಮ್ಮ ಸಿದ್ದರಾಮಯ್ಯಗೆ ಈ ಸ್ಥಿತಿ ಬಂತು – ಮುಡಾ ಅಧ್ಯಕ್ಷರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್
- Advertisement
ನಂತರ ನಿಮ್ಮ ಅಕೌಂಟ್‌ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್‌ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ. ಇದನ್ನೂ ಓದಿ: ಪಿತೃಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ!
- Advertisement
ಯಾರೋ ಅಪರಿಚಿತ ವ್ಯಕ್ತಿಗಳು ಎನ್‌ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್‌ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್‌ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: ಕೇವಲ 28 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ 1.64 ಕೋಟಿ ರೂ. ಹಣ ಸಂಗ್ರಹ
ಇದೇ ರೀತಿ ಕಳೆದ ಹಲವು ತಿಂಗಳುಗಳಿಂದ ಪ್ರಕರಣಗಳು ಹೆಚ್ಚಾದರೂ ಸಾರ್ವಜನಿಕರು ಮಾತ್ರ ನಿರ್ಲಕ್ಷ್ಯದಿಂದ ದುಪ್ಪಟ್ಟು ಹಣದ ಆಸೆಗೆ ಬಿದ್ದು ಹಣ ಕಳೆದುಕೊಳ್ಳುತ್ತಿದ್ದಾರೆ. ಆನ್‌ಲೈನ್, ಟ್ರೇಡಿಂಗ್ ವಂಚನೆಯಿಂದ ಸಾಕಷ್ಟು ಜಾಗೃತವಾಗಿರಿ ಎಂದು ಪೊಲೀಸ್ ಇಲಾಖೆ, ಮಾಧ್ಯಮಗಳು ಎಷ್ಟೇ ಜಾಗೃತಿ ಮೂಡಿಸಿದರೂ ಜನರು ವಂಚಕರ ಜಾಲಕ್ಕೆ ಸಿಲುಕುತ್ತಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ – ಪ್ರಯಾಣಿಕರಿಗೆ ಗಾಯ