ಬೆಂಗಳೂರು: ಸರ್ಕಾರ ಮತ್ತು ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳನ್ನ ನಿಯಮಗಳ ಹೆಸರಿನಲ್ಲಿ ಹಿಂಸೆ ಮಾಡುತ್ತಿವೆ ಎಂದು ಆರೋಪಿಸಿ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಹೋರಾಟ ನಡೆಸುವ ಘೋಷಣೆ ಮಾಡಿವೆ. ಆ.15 ರಂದು ಖಾಸಗಿ ಶಾಲೆಗಳಲ್ಲಿ ಕರಾಳ ಸ್ವಾತಂತ್ರ್ಯ ದಿನಾಚರಣೆ ಮಾಡುತ್ತೇವೆ ಎಂದು ಘೋಷಣೆ ಮಾಡಿವೆ.
ಖಾಸಗಿ ಹೊಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕ್ಯಾಮ್ಸ್, ಕುಸ್ಮಾ, ಕುಂಸಾ, ಮಾಸ್ ಸೇರಿ ಹಲವು ಖಾಸಗಿ ಶಾಲೆಗಳ ಸಂಘಟನೆಗಳು ಭಾಗಿಯಾಗಿ ಸರ್ಕಾರದ ವಿರುದ್ಧ ಕಿಡಿಕಾರಿದವು. ಅಗ್ನಿಶಾಮಕ ಪ್ರಮಾಣ ಪತ್ರ, ಭೂನಕ್ಷೆ ಮಂಜೂರು, ಭೂ ಪರಿವರ್ತನೆ ಸೇರಿ ಹಲವು ಪ್ರಮಾಣ ಪತ್ರ ನೀಡಲು ಶಿಕ್ಷಣ ಇಲಾಖೆಯಲ್ಲಿ ಹಿಂಸೆ ಆಗ್ತಿದೆ. ಕೋರ್ಟ್ ನಿಯಮ ಮೀರಿ ಶಿಕ್ಷಣ ಇಲಾಖೆ ನಡೆದುಕೊಳ್ತಿದೆ. 2017-18ರ ಒಳಗೆ ನಿರ್ಮಾಣವಾದ ಶಾಲೆಗಳಿಗೂ ನಿಯಮಗಳನ್ನು ಹಾಕುತ್ತಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಭ್ರಷ್ಟಾಚಾರ ಮಾಡಲೇ ಇಂತಹ ನಿಯಮ ಖಾಸಗಿ ಶಾಲೆಗಳ ಮೇಲೆ ಹೇರಲಾಗಿದೆ ಎಂದು ಖಾಸಗಿ ಶಾಲೆಗಳು ಆರೋಪಿಸಿದವು. ಇದನ್ನೂ ಓದಿ: ಪ್ರತಿದಿನ ಪೊಲೀಸ್ ಅಧಿಕಾರಿಗಳು ಕಲೆಕ್ಷನ್ ಮಾಡ್ಲೇಬೇಕು: ಭಾಸ್ಕರ್ ರಾವ್ ಬೇಸರ
ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಸಿಎಂ, ಶಿಕ್ಷಣ ಸಚಿವರಿಗೂ ಈ ಬಗ್ಗೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಿಲ್ಲ. ಮಧು ಬಂಗಾರಪ್ಪ ಅತ್ಯಂತ ದುರ್ಬಲ ಶಿಕ್ಷಣ ಸಚಿವ. ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹ ಮಾಡಿದ್ದೆವು. ಸರ್ಕಾರಕ್ಕೆ ಈಗಾಗಲೇ ಎಲ್ಲಾ ಮಾಹಿತಿ ನೀಡಿದ್ದೇವೆ. ಹೀಗಿದ್ದರೂ ನಮ್ಮ ಮೇಲೆ ದಬ್ಬಾಳಿಕೆ ಮಾಡಲು ಮುಂದಾಗಿದ್ದು, ಸರ್ಕಾರ, ಶಿಕ್ಷಣ ಇಲಾಖೆ ನೀತಿ ಖಂಡಿಸಿ ಸ್ವಾತಂತ್ರ್ಯ ದಿನಾಚರಣೆಯನ್ನ ಕರಾಳ ದಿನಾಚರಣೆಯಾಗಿ ಆಚರಣೆ ಮಾಡ್ತೀವಿ ಎಂದರು.
ಅಂದು ಸುಮಾರು 8 ಸಾವಿರ ಖಾಸಗಿ ಶಾಲೆಗಳ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಸ್ವಾತಂತ್ರ್ಯ ದಿನ ಆಚರಣೆ ಮಾಡುತ್ತೇವೆ ಎಂದರು. ಸರ್ಕಾರ ಸಮಸ್ಯೆಗೆ ಪರಿಹಾರ ನೀಡದೇ ಹೋದರೆ ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನವಾಗಿ ಆಚರಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಇಂದಿನಿಂದ ಗೃಹಲಕ್ಷ್ಮಿಯರ ಖಾತೆಗೆ ಹಣ: ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ