ಲಕ್ನೋ: ಲ್ಯಾಂಡಿಂಗ್ ಸಮಯದಲ್ಲಿ ಚಕ್ರಕ್ಕೆ ವಿದ್ಯುತ್ ವಯರ್ ಸಿಕ್ಕಿಹಾಕಿಕೊಂಡ ಪರಿಣಾಮ ಖಾಸಗಿ ತರಬೇತಿ ವಿಮಾನ ಪತನಗೊಂಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ 6 ಮಂದಿ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಧಾನಿಪುರ ವಾಯುನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಇಂದು ಬೆಳಗ್ಗೆ ವಾಯುನೆಲೆಯಲ್ಲಿ ವಿಟಿ-ಎವಿವಿ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಚಕ್ರಗಳಿಗೆ ವಿದ್ಯುತ್ ವಯರ್‌ಗಳು ಸಿಕ್ಕಿಹಾಕಿಕೊಂಡ ಪರಿಣಾಮ ವಿಮಾನ ಪತನವಾಗಿದೆ.
Advertisement
Trainer aircraft VT-AVV crashes at #Aligarh Dhanipur airstrip, no injuries reported. City Magistrate, says, " 6 people were on-board the aircraft when it crashed after one of its wheels got stuck in a wire during landing. All 6 people are safe with no injuries." pic.twitter.com/jBHrWmrbHQ
— ANI UP/Uttarakhand (@ANINewsUP) August 27, 2019
Advertisement
ನಿರ್ವಹಣೆ ಸಂಬಂಧ ವಿಮಾನವನ್ನು ಧಾನಿಪುರದಲ್ಲಿ ಲ್ಯಾಂಡಿಂಗ್ ಮಾಡಲಾಗುತ್ತಿತ್ತು. ವಿಮಾನ ಪತನಗೊಂಡ ಬಳಿಕ ಅದರಲ್ಲಿ ಇದ್ದವರು ವಿಮಾನದಿಂದ ಹೇಗೋ ಹೊರಬಂದಿದ್ದಾರೆ. ನಂತರ ಕೆಲ ನಿಮಿಷಗಳಲ್ಲಿಯೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಸುಟ್ಟುಹೋಗಿದೆ. ಈ ಬಗ್ಗೆ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.