ಹಾವೇರಿ: ಖಾಸಗಿ ಮತ್ತು ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, 10 ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ತೋಟದ ಯಲ್ಲಾಪುರ ಗ್ರಾಮದ ಬಳಿ ನಡೆದಿದೆ.
ಇನ್ನು ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಸಂಸ್ಥಾಪಕ ಶಶಿಧರ್ ಸಹ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಖಾಸಗಿ ಬಸ್ ಹಾವೇರಿಯಿಂದ ಹುಬ್ಬಳ್ಳಿಯತ್ತ ಹೊರಟ್ಟಿತ್ತು ಎಂದು ತಿಳಿದು ಬಂದಿದೆ.
Advertisement
ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಲ್ಲ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.