ತಮ್ಮ ಮನೆಯ ವಿಳಾಸಕ್ಕೆ ಖಾಸಗಿ ವಿಡಿಯೋ ಲೀಕ್ (Video Leak) ಮಾಡುವುದಾಗಿ ಬೆದರಿಸಿ ಪತ್ರ ಬರೆದವರು ಬೇರೆ ಯಾರೂ ಅಲ್ಲ, ಅವರು ಸಿನಿಮಾ ರಂಗದವರೇ ಆಗಿದ್ದಾರೆ ಎಂದು ಕಿಚ್ಚ ಸುದೀಪ್ (Sudeep) ತಿಳಿಸಿದ್ದಾರೆ. ಅಲ್ಲದೇ, ಅವರು ಯಾರು ಅಂತಾನೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ಪಾಠ ಕಲಿಸಲಾಗುವುದು ಎಂದು ಸುದೀಪ್ ತಿಳಿಸಿದ್ದಾರೆ. ಯಾವುದರ ಮೂಲಕ ಅವರಿಗೆ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ. ಹಾಗೆಯೇ ಕೊಡುತ್ತೇನೆ ಎಂದು ಮಾಧ್ಯಮಗಳೊಂದಿಗೆ ಸುದೀಪ್ ಮಾತನಾಡಿದರು.
Advertisement
ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ (Puttenahalli) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಮಾರ್ಚ್ 29 ರಂದೇ ಆ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸುದೀಪ್ ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದರು. ಇದನ್ನೂ ಓದಿ: ‘ಕಿರಿಕ್ ಪಾರ್ಟಿ’ ರಶ್ಮಿಕಾ ಮಂದಣ್ಣಗೆ ಶುಭಕೋರಿದ ರಕ್ಷಿತ್ ಶೆಟ್ಟಿ ಒಡೆತನದ ನಿರ್ಮಾಣ ಸಂಸ್ಥೆ
Advertisement
Advertisement
ಜಾಕ್ ಮಂಜು (Jack Manju) ನೀಡಿದ ದೂರಿನನ್ವಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರವು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
Advertisement
ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಅಲ್ಲದೇ ಕೇಸ್ ಅನ್ನು ಸಿಸಿಬಿ ವರ್ಗಾಯಿಸಿ ತನಿಖೆ ನಡೆಸುತ್ತಿದ್ದಾರೆ.