ಬೆಳಗಾವಿ: 9ನೇ ತರಗತಿ ವಿದ್ಯಾರ್ಥಿನಿ (Student) ಜೊತೆಗಿನ ಪ್ರೌಢಶಾಲಾ ಶಿಕ್ಷಕನ (Teacher) ಖಾಸಗಿ ವೀಡಿಯೋ (Private Video) ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ಹಿನ್ನೆಲೆ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಖಾನಾಪುರ ಪಟ್ಟಣದಲ್ಲಿ ನಡೆದಿದೆ.
ಬೆಳಗಾವಿ (Belagavi) ಜಿಲ್ಲೆಯ ಖಾನಾಪೂರ ಪಟ್ಟಣದ ಖಾಸಗಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಜತೆಗೆ ಶಿಕ್ಷಕನ ಖಾಸಗಿ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಬಗ್ಗೆ ಈವರೆಗೂ ಯಾವುದೇ ದೂರು ದಾಖಲಾಗಿಲ್ಲ. ಇದನ್ನೂ ಓದಿ: ಮಾರುವೇಷದಲ್ಲಿದ್ದ ಸ್ಯಾಂಟ್ರೋ ರವಿ ಬಗ್ಗೆ ಸುಳಿವು ಕೊಡ್ತು ಹಣೆ ಮೇಲಿನ ಮಾರ್ಕ್
ಖಾಸಗಿ ಶಾಲೆಯ ಶಿಕ್ಷಕ ವಿದ್ಯಾರ್ಥಿನಿಗೆ ಪುಸಲಾಯಿಸಿ, ಸಲುಗೆ ಬೆಳೆಸಿದ್ದ. ಆತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ವಿದ್ಯಾರ್ಥಿನಿಯನ್ನು ಕರೆದೊಯ್ದಿದ್ದು, ಈ ವೇಳೆ ಇಬ್ಬರೂ ಏಕಾಂತದಲ್ಲಿದ್ದ ದೃಶ್ಯಗಳನ್ನು ತನ್ನ ಮೊಬೈಲ್ನಲ್ಲಿ ಸೆರೆಹಿಡಿದ್ದಾನೆ.
ಇದೀಗ ಖಾಸಗಿ ವೀಡಿಯೋ ಲೀಕ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಶಿಕ್ಷಕನನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಆದರೆ ಘಟನೆ ಬಗ್ಗೆ ಇಲ್ಲಿಯವರೆಗೂ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಇದನ್ನೂ ಓದಿ: ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ: ಬೊಮ್ಮಾಯಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k