ದಯವಿಟ್ಟು ತಕ್ಷಣ ಗಮನಿಸಿ – ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಪ್ರಿಯಾ ಸುದೀಪ್ ಕಿಡಿ

Public TV
1 Min Read
SUDEEP PRIYA

ಬೆಂಗಳೂರು: ನಟ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅವರು ನಗರದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾ ಅವರು ಮಳೆಯಿಂದಾಗಿ ತೀರಾ ಹದಗೆಟ್ಟಿರುವ ರಸ್ತೆಯನ್ನು ದುರಸ್ಥಿ ಮಾಡದೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳು ವಿರುದ್ಧ ಗರಂ ಆಗಿದ್ದಾರೆ. ಜೊತೆಗೆ ಅಧಿಕಾರಿಗಳ ಬಳಿಕ ಟ್ವೀಟ್ ಮಾಡುವ ಮೂಲಕ ಪ್ರಿಯಾ ಸುದೀಪ್ ಮನವಿ ಮಾಡಿಕೊಂಡಿದ್ದಾರೆ.

“ಮಳೆಯಿಂದ ರಸ್ತೆಗಳು ಹದಗೆಟ್ಟಿವೆ. ಆದರೆ ಆ ರಸ್ತೆಯಲ್ಲಿಯೇ ಜನರು ಪ್ರತಿನಿತ್ಯ ಕಷ್ಟಪಟ್ಟು ಓಡಾಡುತ್ತಿದ್ದಾರೆ. ಇಲ್ಲಿನ ಜನರ ಸಮಸ್ಯೆಗಳನ್ನು ನಾನೇ ಕಣ್ಣಾರೆ ನೋಡಿದ್ದೇನೆ. ಅಧಿಕಾರಿಗಳಿಗೆ ಅವರ ಕರ್ತವ್ಯವನ್ನು ನಾವು ನೆನಪಿಸಬೇಕಾಗಿರುವುದು ವಿಷಾದಕರವಾಗಿದೆ. ದಯವಿಟ್ಟು ಈ ಕಡೆ ತಕ್ಷಣ ಗಮನಿಸಿ” ಎಂದು ಪ್ರಿಯಾ ಸುದೀಪ್ ಸಂಬಂಧಪಟ್ಟ ಅಧಿಕಾರಿಗಳಿಗೆ ಟ್ವೀಟ್ ಮಾಡುವ ಮೂಲಕ ಅವರ ಕರ್ತವ್ಯವನ್ನು ನೆನಪಿಸಿಕೊಟ್ಟಿದ್ದಾರೆ.

ಇತ್ತೀಚಿಗೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆಗಳು ತುಂಬಾ ಹದಗೆಟ್ಟಿವೆ. ಬೆಂಗಳೂರಿನ ಹಲನಾಯಕನಹಳ್ಳಿ, ಕಸವನಹಳ್ಳಿ, ದೊಡ್ಡಕನ್ನೇಲಿ, ಜುನ್ನಸಾಂದ್ರ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಹೋಗಿದೆ. ಆದರೆ ಹಾಳಾಗಿರುವ ರಸ್ತೆಯಲ್ಲಿ ಶಾಲಾ ಮಕ್ಕಳು, ಕೆಲಸಕ್ಕೆ ಹೋಗವವರು ಮತ್ತು ವಾಹನಗಳು ಬೇರೆ ಮಾರ್ಗವಿಲ್ಲದೆ ಅದೇ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಜನಸಂದಣಿ ಇರುವ ಪ್ರದೇಶದಲ್ಲಿ ಜನರು ಪರದಾಡುತ್ತಿದ್ದರೂ ಅಧಿಕಾರಿಗಳು ಮಾತ್ರ ಈ ಕಡೆ ಗಮನ ಹರಿಸುತ್ತಿಲ್ಲ.

Share This Article
Leave a Comment

Leave a Reply

Your email address will not be published. Required fields are marked *