ಬೆಂಗಳೂರು: ಬಹುಭಾಷಾ ನಟಿ ಪ್ರಿಯಾಮಣಿ ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಬಹುಕಾಲದ ಗೆಳೆಯ ಮುಂಬೈ ಮೂಲದ ಉದ್ಯಮಿ ಮುಸ್ತಫಾ ರಾಜ್ ಜೊತೆ ಪ್ರಿಯಾ ಕಳೆದ ವರ್ಷ ಉಂಗುರ ಬದಲಾಯಿಸಿಕೊಂಡಿದ್ದರು. ಪರಸ್ಪರ ಎರಡೂ ಕುಟುಂಬಗಳ ಸಮ್ಮತಿಯ ಮೇರೆಗೆ ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ ಇಂದು ವಿವಾಹವಾಗಲಿದ್ದಾರೆ.
ಬೆಂಗಳೂರಿನಲ್ಲಿ ಮದುವೆ ನೊಂದಣಿ ಮಾಡಿಸಿಕೊಳ್ಳುವುದರ ಮೂಲಕ ಸರಳವಾಗಿ ಮದುವೆಯಾಗಲಿರುವ ಪ್ರಿಯಾಮಣಿ ಗುರುವಾರ ಬೆಂಗಳೂರಿನ ಜೆ ಪಿ ನಗರದ ಬಳಿ ಇರುವ `ಇಲಾನ್ ಕನ್ವೆಂಷನ್ ಹಾಲ್ ‘ನಲ್ಲಿ ಆರತಕ್ಷತೆ ಮಾಡಿಕೊಳ್ಳಲಿದ್ದಾರೆ. ಸಂಜೆ 7 ಗಂಟೆಯಿಂದ 10 ಗಂಟೆಯವರೆಗೆ ನಡೆಯುವ ಆರತಕ್ಷತೆ ಸಮಾರಂಭಕ್ಕೆ ಕೆಲವೇ ಕೆಲ ಸಿನಿಮಾ ಗಣ್ಯರನ್ನ ಹಾಗೂ ಸ್ನೇಹಿತರನ್ನು ಆಹ್ವಾನಿಸಲಾಗಿದೆ.
`ರಾಮ್’ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಕಾಲಿಟ್ಟ ಪ್ರಿಯಾಮಣಿ ಹತ್ತಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡದಲ್ಲಿ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಪ್ರಿಯಾಮಣಿ ಇದೀಗ ಗೆಳೆಯ ಮುಸ್ತಫಾ ರಾಜ್‍ರನ್ನ ಜೀವನ ಸಂಗಾತಿಯಾಗಿ ಸ್ವೀಕರಿಸುತ್ತಿದ್ದಾರೆ.