ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ಮಾಡಿರುವ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪ್ರಕರಣ ಸಂಬಂಧ ತನಿಖೆ ಆಗುತ್ತೆ ಅಂತ ಗೃಹ ಸಚಿವರೇ ಹೇಳಿದ್ದಾರೆ. ಆದರೆ ಈಶ್ವರಪ್ಪ ಮಾತ್ರ ಕೋಮು ಗಲಭೆ ಅಂತಿದ್ದಾರೆ. ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?. ಗೃಹ ಸಚಿವರ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಸಚಿವರು ಮಾಡ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಗೃಹ ಸಚಿವರಿಗಿಂತ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಎಲ್ಲ ಹೇಗೆ ಗೊತ್ತಾಗುತ್ತೆ..? ತನಿಖೆ ಬಗ್ಗೆ ಅವರಿಗೆ ಎಷ್ಟು ನಂಬಿಕೆ ಇದೆ ಅನ್ನೋದು ಗೊತ್ತಾಗುತ್ತೆ ಎಂದು ಈಶ್ವರಪ್ಪ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುಸಲ್ಮಾನ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆ: ಈಶ್ವರಪ್ಪ
ಘಟನೆ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲ. ದುರ್ದೈವ ಅಂದ್ರೆ ಗೃಹ ಸಚಿವರ ಜಿಲ್ಲೆಯಲ್ಲಿ ಏಕೆ ನಡೆಯುತ್ತಿದೆ..? ರಾಷ್ಟ್ರಧ್ವಜ ಸ್ತಂಭದ ಮೇಲೆ ಕೇಸರಿ ಧ್ವಜ ಹಾರುತ್ತೆ. ಈಗ ಕೊಲೆ ಆಗಿದೆ, ಹೋಮ್ ಮಿನಿಸ್ಟರ್ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈಶ್ವರಪ್ಪ ಅವರಿಗೆ ಏನ್ ಹೇಳಲು ಆಗುತ್ತೆ. ತನಿಖೆ ಆಗುತ್ತೆ ಅಂತಾ ಗೃಹ ಸಚಿವರೇ ಹೇಳಿದ್ದಾರೆ. ಗೃಹ ಸಚಿವರಿಗಿಂತ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಎಲ್ಲ ಹೇಗೆ ಗೊತ್ತಾಗುತ್ತೆ..?. ಈ ಬಗ್ಗೆ ಸ್ಪಷ್ಟನೆ ಕೊಡಲಿ, ತನಿಖೆ ಬಗ್ಗೆ ಅವರಿಗೆ ಎಷ್ಟು ನಂಬಿಕೆ ಇದೆ ಅನ್ನೋದು ಗೊತ್ತಾಗುತ್ತೆ ಎಂದರು. ಇದನ್ನೂ ಓದಿ: ಯಾರೂ ಘಟನೆಯನ್ನು ದುರ್ಬಳಕೆ ಮಾಡಿಕೊಳ್ಳಬೇಡಿ: ಡಿಕೆಶಿ ಮನವಿ