Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ ಅಧಿಕಾರಿಗಳನ್ನು ಸಜ್ಜುಗೊಳಿಸಿ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ ಅಧಿಕಾರಿಗಳನ್ನು ಸಜ್ಜುಗೊಳಿಸಿ: ಪ್ರಿಯಾಂಕ್ ಖರ್ಗೆ

Bengaluru City

ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ ಅಧಿಕಾರಿಗಳನ್ನು ಸಜ್ಜುಗೊಳಿಸಿ: ಪ್ರಿಯಾಂಕ್ ಖರ್ಗೆ

Public TV
Last updated: November 4, 2025 8:25 pm
Public TV
Share
2 Min Read
Priyank Kharge
SHARE

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸೂಚಿಸಿದರು.

ಬೆಂಗಳೂರಿನ (Bengaluru) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈ ಸಂಬಂಧ ಹೊಸದಾಗಿ ಬಿಡುಗಡೆ ಮಾಡಿರುವ ನಿಯಮಾವಳಿಗಳನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ವ್ಯವಸ್ಥೆ ಮಾಡಲು ತಿಳಿಸಿದರು.ಇದನ್ನೂ ಓದಿ: ಮಾಲೂರಿನಲ್ಲಿ ನಿಜವಾಗಿಯೂ ಗೆದ್ದವರು ಯಾರು? – ನ.11ಕ್ಕೆ ಮರು ಮತ ಎಣಿಕೆ

ರಾಜ್ಯದ ಲಕ್ಷಾಂತರ ಮಂದಿ ಈ ಯೋಜನೆಯ ಲಾಭ ಹೊಂದಲು ತವಕದಿಂದ ಕಾಯುತ್ತಿದ್ದಾರೆ. ಸಾರ್ವಜನಿಕರಿಗೆ ಸುಲಲಿತವಾಗಿ ಹಾಗೂ ಪಾರದರ್ಶಕವಾಗಿ ಇ-ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವನ್ನು ಪಡೆದು ಸ್ವತ್ತು ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ಸೂಚನೆ ನೀಡಿದರು.

Priyank Kharge 1

ಗ್ರಾಮ ಪಂಚಾಯತಿಗಳ ಸಂಪನ್ಮೂಲವನ್ನು ವೃದ್ಧಿಸುವ ಮೂಲಕ ಸ್ಥಳೀಯ ಸರ್ಕಾರಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೂತನವಾಗಿ ಅನುಷ್ಠಾನಕ್ಕೆ ತಂದಿರುವ ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್) ಅಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಲಭ್ಯವಿರುವ ಆಸ್ತಿಗಳನ್ನು ಪತ್ತೆ ಮಾಡಬೇಕು. ಅಂತಹ ಸ್ಥಳದಲ್ಲಿ ಪಂಚಾಯತಿಗಳಿಗೆ ಶಾಶ್ವತ ಆದಾಯ ತಂದುಕೊಡುವ ಕಟ್ಟಡಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರವಾಸಿ ತಾಣಗಳು ಹಾಗೂ ಯಾತ್ರಾಸ್ಥಳಗಳ ಸಮೀಪ ಲಭ್ಯವಿರುವ ಗ್ರಾಮ ಪಂಚಾಯತಿ ಆಸ್ತಿಗಳಲ್ಲಿ ಸಂಪನ್ಮೂಲ ಹೆಚ್ಚಿಸುವ ಯೋಜನೆಗಳನ್ನು ರೂಪಿಸಿದ್ದಲ್ಲಿ ಸರ್ಕಾರ ಅನುದಾನ ನೀಡಲಿದೆ ಎಂದು ಪ್ರಕಟಿಸಿದರು.

ಕೆಲವು ಜಿಲ್ಲೆಗಳಲ್ಲಿ ಆಸ್ತಿತೆರಿಗೆಯನ್ನು ಸಂಗ್ರಹಿಸುವಲ್ಲಿ ಪ್ರಗತಿ ಕುಂಠಿತವಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ತೆರಿಗೆ ವಸೂಲಾತಿಗೆ ಆದ್ಯತೆ ನೀಡಲು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸೂಚನೆ ನೀಡಲು ಹಾಗೂ ಸಭೆ, ವಿಮರ್ಶೆ, ಸ್ಥಳ ಪರೀಕ್ಷೆ ಮೂಲಕ ಆದ್ಯ ಗಮನ ಹರಿಸಲು ತಾಲ್ಲೂಕು ಪಂಚಾಯತಿ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ವಿಡಿಯೋ ಸಂವಾದ ಸಭೆಯಲ್ಲಿ ಸೂಚನೆ ನೀಡಿರುವಂತೆ ಕಾರ್ಯಕ್ರಮ ಯಶಸ್ಸಿಗೆ ಕ್ರಮ ಕೈಗೊಂಡು, ಗ್ರಾಮ ಪಂಚಾಯತಿಗಳನ್ನು ದತ್ತು ತೆಗೆದುಕೊಂಡು ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

Priyank Kharge 2

ಸಾರ್ವಜನಿಕರು ನೀಡುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳ ನಿವಾರಣೆಗೆ ಕ್ರಮ ತೆಗೆದುಕೊಳ್ಳಿ. ಮೇಜಿನಿಂದ ಮೇಜಿಗೆ ಪತ್ರ ರವಾನೆ ಆದ ಮಾತ್ರಕ್ಕೆ ಸಾರ್ವಜನಿಕರ ಸಮಸ್ಯೆ ಬಗೆಹರಿಯುವುದಿಲ್ಲ, ಅವರ ಸಮಸ್ಯೆಗೆ ಪ್ರಾಮಾಣಿಕ ಪ್ರಯತ್ನ ಮಾಡಿ, ಕೆಳಹಂತದ ಅಧಿಕಾರಿಗಳಿಗೆ ಕಳುಹಿಸಿದ ದೂರುಗಳ ಸ್ಥಿತಿ ಗತಿಗಳ ಬಗ್ಗೆ ವಿವರಗಳನ್ನು ಪಡೆಯಿರಿ. ಸಮಸ್ಯೆ ಬಗೆಹರಿದ ನಂತರ ದೂರುದಾರರಿಗೆ ಉತ್ತರ ನೀಡುವ ಪರಿಪಾಠ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸಮೀರ್ ಶುಕ್ಲಾ, ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ | ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಜೆಡಿಎಸ್ ಸಭೆ- ಹೆಚ್ಚು ಶಿಕ್ಷಕರ ನೋಂದಣಿಗೆ ನಿರ್ಧಾರ

 

TAGGED:bengaluruE-SwathuPriyank Khargeಇ-ಸ್ವತ್ತುಕಾಂಗ್ರೆಸ್ಗ್ರಾಮೀಣಾಭಿವೃದ್ಧಿಪ್ರಿಯಾಂಕ್ ಖರ್ಗೆಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
4 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
12 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
16 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?