– ದೊಡ್ಮನೆ, ದೊಡ್ಡ ಕುಟುಂಬದವರಿಗೆ ನೀವು ಕೇಳಬೇಕು ಎಂದ ಸಚಿವ
ಕಲಬುರಗಿ: ಸೂರಜ್ ರೇವಣ್ಣ ಪ್ರಕರಣ (Suraj Revanna Case) ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತೀವ್ರ ಬೇಸರ ಹೊರಹಾಕಿದ್ದಾರೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಕುರಿತು ಕಲಬುರಗಿಯಲ್ಲಿ (Kalaburagi) ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇದನ್ನೂ ಓದಿ: Breaking: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಬಂಧನ
Advertisement
Advertisement
ಈ ಪ್ರಕರಣದ ಬಗ್ಗೆ ಏನು ಮಾತನಾಡಬೇಕು ಅಂತ ಗೊತ್ತಾಗ್ತಿಲ್ಲ. ಇವೆಲ್ಲಾ ವಿಚಿತ್ರ, ವಿಕೃತ, ಅಸಹ್ಯ ಪಡುವ ಪ್ರಕರಣಗಳು. ಪ್ರಜ್ವಲ್, ಸೂರಜ್, ಯಡಿಯೂರಪ್ಪ ಪ್ರಕರಣಗಳಲ್ಲಿ ಯಾವುದೇ ಆಗಿರಬಹುದು. ಯಾರು ಮಾಡಿದ್ದಾರೆ, ಅವರಿಗೂ ಏನು ಅನ್ನಿಸುತ್ತಿಲ್ಲವಲ್ಲ. ಅವರು ಆತ್ಮಾವಲೋಕನ ಮಾಡಿಕೊಳ್ಳತ್ತಿಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಸಂತ್ರಸ್ತನಿಗಿಂದು ಬೆಂಗ್ಳೂರಲ್ಲಿ ಮೆಡಿಕಲ್ ಟೆಸ್ಟ್!
Advertisement
ನಾವು ಜವಾಬ್ದಾರಿ ಕುಟುಂಬದಿಂದ ಬಂದಿರೋದು, ಈ ಪ್ರಕರಣದ ಕುರಿತು ದೊಡ್ಡ ಮನೆ, ದೊಡ್ಡ ಕುಟುಂಬದವರಿಗೆ ನೀವು ಕೇಳಬೇಕು. ಈ ಕಳಂಕ ಅಳಿಸೋವರೆಗೂ ಅಧಿಕಾರ ಬಿಟ್ಟಿರುತ್ತೇವೆ ಅಂತನಾದರೂ ಹೇಳ್ತಾರಾ? ಕುಮಾರಸ್ವಾಮಿ, ದೇವೆಗೌಡ, ರೇವಣ್ಣ ಅವರ ಬಗ್ಗೆ ನಾನು ಮಾತನಾಡೋದಿಲ್ಲ. ಅವರ ಆತ್ಮಸಾಕ್ಷಿಗೆ ತಿಳಿದಂತೆ ಅವರು ಕೆಲಸ ಮಾಡಬೇಕು. ಆದ್ರೆ ಬಿಜೆಪಿಯವರ ಸ್ಮಶಾನ ಮೌನ ಯಾಕೆ ಅಂತಾ ಗೋತ್ತಾಗ್ತಿಲ್ಲ. ಉಳಿದ ಸಮಯದಲ್ಲಿ ನ್ಯಾಯದ ಬಗ್ಗೆ ಮಾತಾಡುವ ಬಿಜೆಪಿಯವರು ಇವಾಗ ಮೌನ ಯಾಕೆ? ಸಂವಿಧಾನ ಉಲ್ಲಂಘನೆ , ಕಾನೂನು ಉಲ್ಲಂಘನೆ ಆದಾಗಾ ಮಾತಾಡೋದಿಲ್ಲ ಎಂದು ಕುಟುಕಿದ್ದಾರೆ.
Advertisement
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಸೆನ್ ಠಾಣೆ ಪೊಲೀಸರು ಸೂರಜ್ ರೇವಣ್ಣ ಅವರನ್ನ ಬಂಧಿಸಿದ್ದಾರೆ. ಸದ್ಯ ಅವರನ್ನ ಬೆಂಗಳೂರಿಗೆ ಕರೆತರಲಾಗಿದೆ. ಮೆಡಿಕಲ್ ಟೆಸ್ಟ್ ಮುಗಿದ ನಂತರ ಸಂಜೆ 4 ಗಂಟೆ ವೇಳೆಗೆ ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ನೀಟ್, ನೆಟ್ ಪರೀಕ್ಷೆಯಲ್ಲಿ ಅಕ್ರಮ – ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ವಜಾ